ರಾಜ್ಯವಿಧಾನಸೌಧದಲ್ಲಿ ಶಾಸಕರಿಗೆ ನಿದ್ರಾ ಭಾಗ್ಯ: ಭೋಜನದ ಬಳಿಕ ಕಿರು ನಿದ್ರೆ ಮಾಡುವವರಿಗಾಗಿ ರಿಕ್ಲೈನರ್ ಚೇರ್ ವ್ಯವಸ್ಥೆ- ಖಾದರ್
ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಗ್ಗೆ ಬೇಗ ಕಲಾಪಕ್ಕೆ ಆಗಮಿಸಲು ಅನುವಾಗುವಂತೆ ಸ್ಪೀಕರ್ ಖಾದರ್ ಶಾಸಕರಿಗೆ ವಿಧಾನಸೌಧದಲ್ಲೇ ಉಚಿತವಾಗಿ ಬೆಳಗ್ಗೆ 9 ಗಂಟೆಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಿದ್ದಾರೆ.