Recoveries

ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳು 60 ಲಕ್ಷಕ್ಕೆ ಏರಿಕೆ!
ಭಾರತದಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 70 ಲಕ್ಷ ದಾಟಿದ್ದರೂ ಕಳೆದ 24 ಗಂಟೆಗಳಲ್ಲಿ 89,154 ಜನರು ಚೇತರಿಸಿಕೊಂಡಿದ್ದು, ಒಟ್ಟಾರೆ ಚೇತರಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೆ ಏರಿಕೆಯಾಗಿದೆ.

ಕೋವಿಡ್-19: ಚೇತರಿಕೆಯಲ್ಲಿ ಬ್ರೆಜಿಲ್ ಹಿಂದಿಕ್ಕಿದ ಭಾರತ, ವಿಶ್ವದಲ್ಲಿಯೇ ನಂಬರ್ 1
ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯ ಕೋವಿಡ್-19 ರೋಗಿಗಳು ಭಾರತದಲ್ಲಿ ಗುಣಮುಖರಾಗುತ್ತಿದ್ದಾರೆ.ಜಾನ್ಸ್ ಹಾಪ್ ಕಿನ್ಸ್ ಯುನಿವರ್ಸಿಟಿ ಮಾಹಿತಿ ಪ್ರಕಾರ ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚಿನ 37, 80,107 ಮಂದಿ ಸೋಂಕಿತರು ಭಾರತದಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

