Red alert

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ: ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ
ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳನ್ನು ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ.

ಮಹಾರಾಷ್ಟ್ರ ಮಳೆ: ಪುಣೆಯಲ್ಲಿ ವರುಣನ ಅಬ್ಬರ; ನಾಲ್ಕು ಸಾವು, ಶಾಲೆ-ಕಾಲೇಜುಗಳಿಗೆ ರಜೆ
ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಜುಲೈ 20 ರವರೆಗೆ ರೆಡ್ ಅಲರ್ಟ್ ಘೋಷಣೆ
ಜುಲೈ 19 ಮತ್ತು 20 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಭಾಗದಲ್ಲಿ ಮುಂದುವರೆದ ಮಳೆ: ನಾಳೆಯವರೆಗೂ 'ರೆಡ್ ಆಲರ್ಟ್' ವಿಸ್ತರಣೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನಲ್ಲಿ ಆರು, ಕುಮಟಾ ತಾಲೂಕಿನಲ್ಲಿ 6, ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ 26 ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, 2,368 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ರೆಡ್ ಅಲರ್ಟ್ ಮುಂದುವರಿಕೆ
ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮತ್ತು ನಿರಂತರ ಮಳೆಯಾಗುತ್ತಿದ್ದು, IMD ಜುಲೈ 16ರ ವರೆಗೆ ರಾಜ್ಯದ ದಕ್ಷಿಣ ಒಳಭಾಗ ಮತ್ತು ಕರಾವಳಿ ಭಾಗಗಳಿಗೆ ತನ್ನ ರೆಡ್ ಅಲರ್ಟ್ ಅನ್ನು ಮುಂದುವರಿಸಿದೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ, ರೆಡ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಭಾಗದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ; ಶಾಲಾ, ಕಾಲೇಜುಗಳಿಗೆ ರಜೆ
ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಕೇರಳದಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ: IMD
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಣೆ ಮಾಡಿದೆ.

ತಾಪಮಾನ ಹೆಚ್ಚಳ: ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

