Red fort

77ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ, ದೇಶವನ್ನುದ್ದೇಶಿಸಿ ಸುದೀರ್ಘ ಭಾಷಣ
ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯಂದು ಜನತೆಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶದ 77ನೇ ಸ್ವಾತಂತ್ರ್ಯ ದಿನದಂದು ಜನರಿಗೆ ಶುಭಾಶಯ ಕೋರಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಅವರು, ಹೋರಾಟಗಾರರ ದೃಷ್ಟಿಯನ್ನು ಈಡೇರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

ಕೆಂಪುಕೋಟೆಯಿಂದ ಮಾಡುವ ಈ ಬಾರಿಯ ಸ್ವಾತಂತ್ರೋತ್ಸವ ಭಾಷಣವೇ ಪ್ರಧಾನಿ ಮೋದಿಯ ಕೊನೆಯ ಭಾಷಣ: ಮಮತಾ ಬ್ಯಾನರ್ಜಿ
ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಈ ವರ್ಷದ ಸ್ವಾತಂತ್ರೋತ್ಸವದ ಭಾಷಣವೇ ಅವರ ಕೊನೆಯ ಭಾಷಣವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರತಿಪಾದಿಸಿದ್ದಾರೆ.

77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ಆಗಸ್ಟ್ 14 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಭಾನುವಾರ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪು ಕೋಟೆ, ರಾಜ್‌ಘಾಟ್ ಸುತ್ತಮುತ್ತ ಸೆಕ್ಷನ್ 144 ಜಾರಿ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

'ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳು': ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ತಿವಿದ ಪ್ರಧಾನಿ ಮೋದಿ
ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ಕಾಂಗ್ರೆಸ್ ಗೆ ಪರೋಕ್ಷವಾಗಿ ತಿವಿದಿದ್ದು, ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳಾಗಿವೆ ಎಂದು ಹೇಳಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿರುವ 17ನೇ ಶತಮಾನದ ಮೊಘಲರ ಕಾಲದ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿ ವಂದನೆ ಸಲ್ಲಿಸಿದರು.

ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಸ್ವದೇಶಿ ನಿರ್ಮಿತ ಗನ್ ಗಳು, ಎಂಐ- 17 ಹೆಲಿಕಾಪ್ಟರ್ ಬಳಕೆ!
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮ ಈ ಬಾರಿ ವಿಶೇಷವಾಗಿತ್ತು. ತ್ರಿವರ್ಣ ಧ್ವಜಕ್ಕೆ 21 ಬಾರಿ ಕುಶಾಲ ತೋಪು ಸಿಡಿಸಿ ವಂದನೆ ಸಲ್ಲಿಸಲು 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸ್ವದೇಶಿ ಗನ್ ಗಳನ್ನು ಬಳಸಲಾಯಿತು.

Independence Day: ಟೆಲಿಪ್ರಾಂಪ್ಟರ್ ಬಿಟ್ಟು ಕಾಗದ ಬಳಸಿ ಭಾಷಣ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ ಬಳಕೆ ಮಾಡಿದ್ದಾರೆ.

