ದೇಶಶಾಲಾ ಪಠ್ಯಕ್ರಮ ಕಡಿಮೆ ಮಾಡಲು ಸರ್ಕಾರ ಚಿಂತನೆ; ಶಿಕ್ಷಕರು, ಶಿಕ್ಷಣ ತಜ್ಞರ ಸಲಹೆ ಕೇಳಿದ ಕೇಂದ್ರ
ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಕ್ರಮ ಮತ್ತು ಕಲಿಕಾ ಸಮಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ‘ನಿಶಾಂಕ್’ ಅವರು ಮಂಗಳವಾರ ಹೇಳಿದ್ದಾರೆ.