Rekha Kadiresh

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಹಿಂದಿನ ಮಾಸ್ಟರ್'ಮೈಂಡ್ ಅವರ ನಾದಿನಿ ಮಾಲಾ!
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ನಾದಿನಿ ಮಾಲಾ ಮಾಸ್ಟರ್ ಮೈಂಡ್ ಆಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ: ಅತ್ತಿಗೆ, ಸೋದರಳಿಯನ ಬಂಧನ
ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಖಾ ಕದಿರೇಶ್ ಅವರ ಇಬ್ಬರು ಸಂಬಂಧಿಕರನ್ನು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಅವರನ್ನು ತನಿಖಾಧಿಕಾರಿಗಳು ಪ್ರಶ್ನಿಸಿದ ನಂತರ ಬಂಧಿಸಲಾಯಿತು.

ರೇಖಾ ಕದಿರೇಶ್ ಹತ್ಯೆಯ ಹಿಂದೆ ಕುಟುಂಬಸ್ಥರ ಕೈವಾಡ?: ತನಿಖೆ ಮುಂದುವರಿಕೆ
ಕಳೆದ ಗುರುವಾರ ಹಾಡಹಗಲೇ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಐವರನ್ನು ಪೊಲೀಸರು ಬಂಧಿಸಿದ್ದು ಅವರ ತೀವ್ರ ವಿಚಾರಣೆ ಮುಂದುವರಿದಿದೆ.

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

ರೇಖಾ ಕದಿರೇಶ್ ಹತ್ಯೆ ಆರೋಪಿಗಳಾದ ಪೀಟರ್, ಸೂರ್ಯ ಬಂಧನ: ಕಾರ್ಯಾಚರಣೆಯಲ್ಲಿ ಪೊಲೀಸರು ಯಶಸ್ವಿ
ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ: ಶಂಕಿತರ ವಿಚಾರಣೆ
ಬಿಬಿಎಂಪಿಯ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವಿಧಿವಿಧಾನ ಮುಗಿದ ಬಳಿಕ ಅವರ ಕುಟುಂಬಸ್ಥರಿಗೆ ಶುಕ್ರವಾರ ಬೆಳಗ್ಗೆ ಮೃತದೇಹ ಹಸ್ತಾಂತರಿಸಲಾಗಿದೆ.

ಬೆಂಗಳೂರಿನಲ್ಲಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿ
ಮಹಾನಗರ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ಪಾಲಿಕೆಯ ಮಾಜಿ ಸದಸ್ಯೆಯ ಹತ್ಯೆಯಾಗಿದೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

