ದೇಶದೆಹಲಿ ಹಿಂಸಾಚಾರ: ವಿದ್ಯಾರ್ಥಿ ಹೋರಾಟಗಾರರಾದ ನತಾಶಾ, ದೇವಾಂಗನಾ, ಆಸಿಫ್ ಜಾಮೀನಿನ ಮೇಲೆ ಬಿಡುಗಡೆ
ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಾಂಗನಾ ಕಲಿತಾ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ, ಅವರೆಲ್ಲರೂ ಇಂದು ತಿಹಾರ್ ಜೈಲಿನಿಂದ ಹೊರಗಡೆ ಬಂದಿದ್ದಾರೆ.