Reliance Group

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ ಮೌಲ್ಯದ ಹೆಚ್ಚುವರಿ ಆಸ್ತಿ ಮುಟ್ಟುಗೋಲು!
ಈ ಆದೇಶದೊಂದಿಗೆ, ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳ ಒಟ್ಟು ಮೌಲ್ಯ 20,367 ಕೋಟಿ ರೂ.ಗಳಿಗೆ ತಲುಪಿದ್ದು, ಜಾರಿ ನಿರ್ದೇಶನಾಲಯ ನಾಲ್ಕು ಆರೋಪಪಟ್ಟಿಗಳನ್ನು ಸಲ್ಲಿಸಿದ್ದು, ಇಲ್ಲಿಯವರೆಗೆ ಎಂಟು ಜನರನ್ನು ಬಂಧಿಸಿದೆ.

ಯೆಸ್ ಬ್ಯಾಂಕ್ ನಿಂದ ಸಾಲ ಪಡೆದುಕೊಂಡಿದ್ದು ನಿಜ, ಮರು ಪಾವತಿಸಲು ಬದ್ಧ: ರಿಲಯನ್ಸ್ ಗ್ರೂಪ್
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್‌ನಿಂದ ತನ್ನ ಸಂಪೂರ್ಣ ಸಾಲವನ್ನು ಪಡೆದುಕೊಂಡಿದ್ದು, ಸಾಲ ಮರುಪಾವತಿಸಲು ಬದ್ಧ ಎಂದು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಗ್ರೂಪ್ ಬುಧವಾರ ಹೇಳಿದೆ.

ರಾಫೆಲ್ ವಿವಾದ: ಎನ್ ಡಿಟಿವಿ ವಿರುದ್ಧ ಭಾರಿ ಮೌಲ್ಯದ ಮಾನನಷ್ಟ ಮೊಕದ್ದಮೆ ಹೂಡಿದ ಅನಿಲ್ ಅಂಬಾನಿ
ಪ್ರಧಾನಿ ಮೋದಿ ಸರ್ಕಾರ ಮತ್ತು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಸ್ಥೆಯನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿರುವ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ವರದಿ ಪ್ರಕಟಿಸಿದ ಸುದ್ದಿ ಮಾಧ್ಯಮದ ವಿರುದ್ಧ ಅನಿಲ್ ಅಂಬಾನಿ ಭಾರಿ ಮೌಲ್ಯದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ನ್ಯಾಷನಲ್ ಹೆರಾಲ್ಡ್ ವಿರುದ್ಧ ಅನಿಲ್ ಅಂಬಾನಿ ದುಬಾರಿ ಮಾನನಷ್ಟ ಮೊಕದ್ದಮೆ
ರಫೇಲ್ ಹಗರಣಕ್ಕೆ ಸಂಬಂಧಿಸಿದಂತೆ ಮಾನಹಾನಿ ಲೇಖನ ಪ್ರಕಟಿಸಿದೆ ಎಂದು ಆರೋಪಿಸಿ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಿಲ್ ಅಂಬಾನಿ ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ವಿರುದ್ಧ ದುಬಾರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಪಠ್ಯವಾಗಲಿರುವ ಅಂಬಾನಿ ಜೀವನಗಾಥೆ
ದೇಶದ ಖ್ಯಾತ ಉದ್ಯಮಿ ರಿಲಯನ್ಸ್ ಸಮೂಹದ ಸಂಸ್ಥಾಪಕ ಧೀರೂಭಾಯ್ ಅಂಬಾನಿಯ ಕುರಿತು ಒಂದು ಪಾಠವನ್ನು ಶಾಲಾ ಪಠ್ಯಪುಸ್ತಕದಲ್ಲಿ ಸೇರಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಚಿಂತಿಸುತ್ತಿದೆ.

