ರಾಜ್ಯಬರ ಪರಿಹಾರ ಮನವಿ ಬಗ್ಗೆ ಶೀಘ್ರ ನಿರ್ಧಾರ ಕೈಗೊಂಡು ನೆರವು ಬಿಡುಗಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವರ ಬಳಿ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಹೇಳಿದರು.