ರಾಜ್ಯಕೊಡಗು: ಮಡಿಕೇರಿಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಪರಿಹಾರ ಚೆಕ್ ವಿತರಣೆ
ಭಾರೀ ಮಳೆಯಿಂದ ವ್ಯಾಪಕ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಇಂದು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆಗೆ ಗೋಡೆ ಕುಸಿತಗೊಂಡು ನೆಲೆ ಕಳೆದುಕೊಂಡಿರುವ ಜನರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು, ಸರ್ಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಿದರು.