ಸಿನಿಮಾ ಸುದ್ದಿಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಮೋಹನ್ ನಿಧನ
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ಮಾಪಕ, ನವರಂಗ್ ಚಿತ್ರಮಂದಿರದ ಮಾಲೀಕ ಕೆ.ಸಿ.ಎನ್ ಮೋಹನ್ ಭಾನುವಾರ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.