reopening

ವಿಜಯವಾಡ: ಶೀಘ್ರದಲ್ಲೇ ಅಣ್ಣಾ ಕ್ಯಾಂಟೀನ್ ಪುನರಾರಂಭ- ಸಿಎಂ ಚಂದ್ರಬಾಬು ನಾಯ್ಡು
ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.

ಸಿಲಬಸ್ ಮುಗಿಸಲು ಶಿಕ್ಷಕರ ರಜೆ ಕಡಿತ; 1 ರಿಂದ 5ನೇ ತರಗತಿ ಪ್ರಾರಂಭಿಸಲು ಶೀಘ್ರ ನಿರ್ಧಾರ- ಸಚಿವ ನಾಗೇಶ್
ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶನಿವಾರ ಹೇಳಿದ್ದಾರೆ.

ಶಾಲೆಯೆಂಬ ದೇವಸ್ಥಾನ ನಮ್ಮ ಸಮಾಜಕ್ಕೆ ಒಳಿತು ಮಾಡಲಿ: ಸುರೇಶ್ ಕುಮಾರ್
ಸಾಂಕ್ರಾಮಿಕ ಕೊರೊನಾ ಹಿನ್ನೆಲೆಯಲ್ಲಿ ಶಾಲೆಗೆ ಬೀಗ ಹಾಕಲಾಗಿತ್ತು. ಇದೀಗ ಮೊದಲ ಹಂತವಾಗಿ 9, 10, 11 ಮತ್ತು 12ನೇ ತರಗತಿಗಳು ಸೋಮವಾರದಿಂದ ಆರಂಭವಾಗಿದ್ದು, ಶಾಲೆಗೆ ಮರಳಿ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಭಾಶಯ ತಿಳಿಸಿದ್ದಾರೆ.

ಕೋವಿಡ್ ಟಿಪಿಆರ್ ಶೇ.5 ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಪ್ರಾಥಮಿಕ ಶಾಲೆ ತೆರೆಯಬಹುದು: ಐಸಿಎಂಆರ್ ಮುಖ್ಯಸ್ಥ
ಸರ್ಕಾರದ ಹಿರಿಯ ಅಧಿಕಾರಿಗಳು ಮೊದಲು ಪ್ರಾಥಮಿಕ ಶಾಲೆಗಳನ್ನು ಕೋವಿಡ್ ಟಿಪಿಆರ್ ಶೇ.5ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ತೆರೆಯುವುದಕ್ಕೆ ಸಲಹೆ ನೀಡಿದ್ದಾರೆ.

ಶಾಲೆಗಳ ಆರಂಭ ಕುರಿತು ಸೋಮವಾರ ಅಂತಿಮ ತೀರ್ಮಾನ: ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಸೋಮವಾರದಂದು ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂ ರಪ್ಪ ತಿಳಿಸಿದ್ದಾರೆ.

ಇಂದಿನಿಂದ ಪದವಿ ತರಗತಿ ಆರಂಭ; ಕೋವಿಡ್ ಮುಂಜಾಗ್ರತಾ ಕ್ರಮ ಪಾಲಿಸಿ: ವಿದ್ಯಾರ್ಥಿಗಳಿಗೆ ಸುಧಾಕರ್ ಮನವಿ
ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ನವಂಬರ್ 17ಕ್ಕೆ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಆರಂಭ ಖಚಿತ: ರಾಜ್ಯ ಸರ್ಕಾರ
ರಾಜ್ಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ನವೆಂಬರ್ 17ರಂದು ಆರಂಭಿಸುವ ನಿರ್ಧಾರಕ್ಕೆ ಉನ್ನತ ಶಿಕ್ಷಣ ಇಲಾಖೆ ಬದ್ಧವಾಗಿದೆ.

ತೂತುಕುಡಿ ಸ್ಟೆರಿಲೈಟ್ ಘಟಕ ಪುನಾರಂಭಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ
ತೂತುಕುಡಿಯಲ್ಲಿರುವ ವೇದಾಂತ ಸ್ಟೆರಿಲೈಟ್ ಘಟಕದ ಪುನಾರಂಭಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.

