Republic Day

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇನ್ನು ಮುಂದೆ ಎಲ್ಲಾ ಹಬ್ಬವೂ ನಡೆಯಲಿದೆ ಎಂದ ಪಿ.ಸಿ. ಮೋಹನ್, ಗರಂ ಆದ ಜಮೀರ್ ಅಹ್ಮದ್
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೈದಾನದಲ್ಲಿ ಎಲ್ಲಾ ಹಬ್ಬವೂ ಆಚರಿಸಲಾಗುತ್ತದೆ ಎಂದು ಸಂಸದ ಪಿ.ಸಿ. ಮೋಹನ್ ಅವರು ಗುರುವಾರ ಹೇಳಿದರು.

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಡಾ.ಶಿವಣ್ಣ
ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿದೆ ಗಣರಾಜ್ಯೋತ್ಸವವನ್ನು ಆಚರಿಸಲಾಗಿದ್ದು, ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ.ಎಂಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾದ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

74ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣಿಕ್ ಷಾ ಪರೇಡ್‌ನಲ್ಲಿ ಧ್ವಜಾರೋಹಣಕ್ಕೆ ಕ್ಷಣಗಣನೆ, ಜನತೆಗೆ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ
ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಪರೇಡ್‌ನಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೇರವೇರಿಸಲಿದ್ದಾರೆ.

74ನೇ ಗಣರಾಜ್ಯೋತ್ಸವ: ವಿಭಿನ್ನ ಕಲಾಕೃತಿ ಮೂಲಕ ಭಾರತೀಯರಿಗೆ ಶುಭಾಶಯ ಕೋರಿದ ಗೂಗಲ್ ಡೂಡಲ್
ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾಶಯಗಳನ್ನು ಕೋರಿದೆ.

74ನೇ ಗಣರಾಜ್ಯೋತ್ಸವ ಸಂಭ್ರಮ: ಪಥಸಂಚಲನಕ್ಕೆ ಕರ್ತವ್ಯಪಥ ಸಜ್ಜು, ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಭದ್ರತೆ
74ನೇ ಗಣರಾಜೋತ್ಸವ ಪರೇಡ್‍ಗೆ ದೆಹಲಿಯ ಕರ್ತವ್ಯ ಪಥ್ ಸಿದ್ಧವಾಗಿದ್ದು, ಈ ಬಾರಿಯ ಗಣರಾಜ್ಯೋತ್ಸಕ್ಕೆ ಈಜಿಪ್ಟ್ ಅಧ್ಯಕ್ಷರು ವಿಶೇಷ ಅತಿಥಿಯಾಗಿ ಭಾಗಿಯಾಗುತ್ತಿದ್ದಾರೆ. ಪರೇಡ್‌ಗೆ 65,000 ಮಂದಿ ಸಾಕ್ಷಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜನೆಗೊಳಿಸಲಾಗಿದೆ.

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತದ ಆರ್ಥಿಕತೆ ಒಂದಾಗಿದೆ- ರಾಷ್ಟ್ರಪತಿ ದ್ರೌಪದಿ ಮುರ್ಮು
ಕೋವಿಡ್ ಸಾಂಕ್ರಾಮಿಕದ ಪರಿಣಾಮದಿಂದ ಆರ್ಥಿಕತೆಯ ಬಹುತೇಕ ಕ್ಷೇತ್ರಗಳು ಅಲುಗಾಡಿದ್ದು, ಸರ್ಕಾರದ ಸಮಯೋಚಿತ ಮತ್ತು ಸಕ್ರಿಯ ಮಧ್ಯಸ್ಥಿಕೆಯಿಂದಾಗಿ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತದ ಆರ್ಥಿಕತೆ ಒಂದಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

74ನೇ ಗಣರಾಜ್ಯೋತ್ಸವ, ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ ದೇಶದ ಪ್ರಮುಖ ಕಟ್ಟಡಗಳು!
ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಸುಪ್ರೀಂಕೋರ್ಟ್ ಸೇರಿದಂತೆ ಪ್ರಮುಖ ಕಟ್ಟಡಗಳು ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ.

ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ 'ನಾರಿ ಶಕ್ತಿ': ವಾರದಲ್ಲೇ ತಯಾರಾಯ್ತು ಸ್ತಬ್ಧಚಿತ್ರ
ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ 'ನಾರಿ ಶಕ್ತಿ' ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿದೆ

