Reservation

ಮಹಿಳಾ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕೇಂದ್ರ ಸಚಿವ
ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಟ್ವೀಟ್ ಮಾಡಿ ನಂತರ ಟ್ವೀಟ್'ನ್ನು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಡಿಲೀಟ್ ಮಾಡಿದ್ದಾರೆ.

ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ ಚಿಂತನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇವಲ ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ: ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅಫಿಡವಿಟ್ಟು ಸಲ್ಲಿಕೆ
ಕೇವಲ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಅಸಂವಿಧಾನಿಕ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ. ಸರ್ಕಾರದ ಈ ಹೇಳಿಕೆ ಸಂವಿಧಾನದ ಆರ್ಟಿಕಲ್ 14,15 ಮತ್ತು 16ಕ್ಕೆ ಮತ್ತು ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆ ತತ್ವಗಳಿಗೆ ತದ್ವಿರುದ್ಧವಾಗಿದೆ.

ಧರ್ಮ ಆಧರಿತ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ, ಕಾಂಗ್ರೆಸ್ ಪಿಎಫ್ಐನ್ನು ಓಲೈಸುತ್ತಿದೆ: ಯೋಗಿ ಆದಿತ್ಯನಾಥ್
ಕರ್ನಾಟಕ ಚುನಾವಣಾ ಕಣ ರಂಗೇರುತ್ತಿದೆ. ಇದೇ ಮೊದಲ ಬಾರಿಗೆ ಕೇಸರಿ ಪಾಳೆಯದಿಂದ ಸ್ಟಾರ್ ಪ್ರಚಾರಕರಾಗಿ ಬುಲ್ಡೋಜರ್ ಬಾಬಾ ಖ್ಯಾತಿಯ, ಪ್ರಖರ ಹಿಂದುತ್ವವಾದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿಯಾಗಿದೆ.

ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ.75ಕ್ಕೆ ಹೆಚ್ಚಿಸುತ್ತೇವೆ: ಸಿದ್ದರಾಮಯ್ಯ (ಸಂದರ್ಶನ)
ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದೆ. ಈ ನಡುವಲ್ಲೇ ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ಎಲ್ಲಾ ಅರ್ಹ ಸಮುದಾಯಗಳಿಗೆ ಒಟ್ಟಾರೆ ಮೀಸಲಾತಿಯನ್ನು ಶೇ.75 ಹೆಚ್ಚುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಶೇ.50ರಷ್ಟು ಮೀಸಲಾತಿ ಮಿತಿ ರದ್ದುಪಡಿಸಿ, ಜಾತಿ ಗಣತಿ ಆಧಾರದ ಮೇಲೆ ಮೀಸಲಾತಿ ನೀಡಿ: ರಾಹುಲ್ ಗಾಂಧಿ
ದೇಶದಲ್ಲಿ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದುಹಾಕಬೇಕು. ಜಾತಿ ಗಣತಿಯನ್ನು ಸಾರ್ವಜನಿಕಗೊಳಿಸಬೇಕು. ಜಾತಿ ಗಣತಿ ಆಧಾರದ ಮೇಲ ಒಬಿಸಿಗಳಿಗೆ ಉತ್ತಮ ಪ್ರಾತಿನಿಧ್ಯ ನೀಡಬೇಕು.

ಮೀಸಲಾತಿ ವಿಚಾರದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೆ ವಂಚಿಸಿದೆ, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು: ಕಾಂಗ್ರೆಸ್
ಒಬಿಸಿ ಲಿಂಗಾಯಿತರು ಸೇರಿದಂತೆ ಎಲ್ಲಾ ಸಮುದಾಯಗಳಿಗು ಬಿಜೆಪಿ ಸರ್ಕಾರ ದ್ರೋಹ ಬಗೆದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಆಗ್ರಹಿಸಿದ್ದಾರೆ.

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಅಗತ್ಯವಿದೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (ಸಂದರ್ಶನ)
ಕಂಪ್ಯೂಟರೀಕರಣದ ನಂತರ ಸರ್ಕಾರಿ ವಲಯದಲ್ಲಿ ಉದ್ಯೋಗಗಳು ಕ್ಷೀಣಿಸುತ್ತಿರುವ ಕಾರಣ, ಖಾಸಗಿ ವಲಯದಲ್ಲಿಯೂ ಮೀಸಲಾತಿಯ ಅಗತ್ಯವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ಅಧಿಕಾರಕ್ಕೆ ಬಂದರೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುತ್ತೇವೆ: ಕಾಂಗ್ರೆಸ್ ಭರವಸೆ
ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಮೀಸಲಾತಿಯನ್ನು ಸಾಧನವಾಗಿ ಬಳಸಿಕೊಂಡಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬೇದಿದ್ದೇ ಆದರೆ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುತ್ತೇವೆಂದು ರಾಜ್ಯ ಕಾಂಗ್ರೆಸ್ ಭಾನುವಾರ ಭರವಸೆ ನೀಡಿದೆ.

