Resignation

ಬಿಜೆಪಿ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ
ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.

ಬಿಎಸ್'ವೈ ಸರ್ಕಾರಕ್ಕೆ 2 ವರ್ಷ: ಸಂಭ್ರಮದ ನಡುವಲ್ಲೇ ನಾಯಕತ್ವ ಬದಲಾವಣೆ ಚರ್ಚೆ, ವರಿಷ್ಠರ ಮೇಲೆ ಭಾರ ಹಾಕಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದೆ. ಈ ಸಂಭ್ರಮದ ನಡುವಲ್ಲೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತ ವಿಚಾರ ಹಲವು ಗೊಂದಲ ಹಾಗೂ ಕುತೂಹಲವನ್ನು ಮೂಡಿಸಿದೆ.

ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ: ಜುಲೈ 26ರ ನಂತರ ರಾಷ್ಟ್ರ ನಾಯಕರ ಸೂಚನೆಯಂತೆ ನಡೆ ಎಂದ 'ರಾಜಾಹುಲಿ'!
ಮೊಟ್ಟ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪದತ್ಯಾಗದ ಸುಳಿವು ನೀಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನೀಡುವ ಸೂಚನೆ ಮೇರೆಗೆ ಜುಲೈ 26ರ ನಂತರ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಬಲಿಪಶು ಮಾಡಲಾಯಿತೇ?: ಜನತೆ ಅಭಿಪ್ರಾಯ ಹೀಗಿದೆ...
ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ.ಹರ್ಷವರ್ಧನ್ ಅವರನ್ನು ಸಂಪುಟದಿಂದ ಕೈಬಿಟ್ಟಿರುವುದು ಹಲವು ಮಂದಿಗೆ ಸರಿ ಕಂಡುಬಂದಿಲ್ಲ.

ಕೇಂದ್ರ ಸಚಿವ ಸ್ಥಾನಕ್ಕೆ ಡಿವಿ ಸದಾನಂದಗೌಡ ರಾಜೀನಾಮೆ
ಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯದಿಂದ ಇಬ್ಬರು ಅಥವಾ ನಾಲ್ವರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಏತನ್ಮಧ್ಯೆ ಡಿ ವಿ ಸದಾನಂದಗೌಡ ಅವರು ರಾಸಾಯನಿಕ ಮತ್ತು ಗೊಬ್ಬರ ಖಾತೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್!
ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ರಾತ್ರಿ 11 ಗಂಟೆ ಸುಮಾರಿನಲ್ಲಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರವನ್ನು ರಾವತ್ ಹಸ್ತಾಂತರಿಸಿದ್ದಾರೆ.

ಇಂಥಾ ಅಧಿಕಾರಿ ಯಾವ ಜಿಲ್ಲೆಗೂ ಬೇಡ, ಇಷ್ಟು ದಿನ ಅವಮಾನ ಸಹಿಸಿಕೊಂಡೆ, ಇನ್ನು ನನ್ನಿಂದಾಗದು: ಶಿಲ್ಪಾ ನಾಗ್
ಗುರುವಾರ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಎರಡು ಖಾತೆ ನಿರ್ವಹಣೆ ಕಷ್ಟವಾದರೆ ರಾಜೀನಾಮೆ ಕೊಡಿ: ಸುಧಾರಕ್ ವಿರುದ್ಧ ರೇಣುಕಾಚಾರ್ಯ ಗರಂ
“ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ದುರಂತ: ಸಿಎಂ, ಆರೋಗ್ಯ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಮೃತಪಟ್ಟ ದುರ್ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

