Resignation

ರಾಸಲೀಲೆ ಪ್ರಕರಣ ಬಯಲಾಗಿ ಅಧಿಕಾರ ಕಳೆದುಕೊಂಡ ಸಚಿವರ ಪಟ್ಟಿ
ರಾಸಲೀಲೆ, ಲೈಂಗಿಕ ಹಗರಣಗಳು, ಸಿಡಿ ಅವಾಂತರಗಳು ಕರ್ನಾಟಕಕ್ಕೆ ಹೊಸದೇನಲ್ಲ. ಗಂಭೀರ ಸ್ವರೂಪದ ಆರೋಪಗಳು ಮತ್ತು ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕ ವೇಳೆ ಹಲವಾರು ಮಂದಿ ಸಚಿವರು ರಾಜೀನಾಮೆ ನೀಡಿರುವ ಉದಾಹರಣೆ ರಾಜ್ಯದಲ್ಲಿವೆ.

ಕೂಡಲೇ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕಾಂಗ್ರೆಸ್
ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರವಾಗಿ ಕಿಡಿಕಾರಿದೆ.

ಸಚಿವ ಸಿ.ಟಿ.ರವಿ ರಾಜೀನಾಮೆ ಅಂಗೀಕರಿಸದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ!
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ.

ಸಚಿವ ಸಿ.ಟಿ.ರವಿ ರಾಜೀನಾಮೆ
ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಕೇವಲ ನಾಟಕ: ಕಾಂಗ್ರೆಸ್
ಶಿರೋಮಣಿ ಅಕಾಲಿ ದಳ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸಂಪುಟದಿಂದ ರಾಜೀನಾಮೆ ನೀಡಿದ್ದು ಕೇವಲ ನಾಟಕೀಯವಾಗಿದ್ದು, ಅವರಿಗೆ ನಿಜವಾಗಿಯೂ ರೈತರ ಪರ ಕಾಳಜಿಯಿದ್ದರೆ ಕೇಂದ್ರ ಸಂಪುಟ ರೈತ ಸಂಬಂಧಿ ವಿಧೇಯಕ ತರುವಾಗ ಏಕೆ ಅವರು ವಿರೋಧಿಸಿರಲಿಲ್ಲ ಎಂದು ಪ್ರಶ್ನಿಸಿದೆ.

ಗಿರೀಶ್ ಮುರ್ಮು ರಾಜೀನಾಮೆ ಅಂಗೀಕಾರ: ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಗಿರೀಶ್ ಮುರ್ಮು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಕೋವಿಂದ್ ಅವರು ಗುರುವಾರ ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ.

ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಸಹಜ, ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು- ನೇಪಾಳ ಪ್ರಧಾನಿ
ರಾಜೀನಾಮೆಯ ಆಗ್ರಹದ ಒತ್ತಡದ ನಡುವೆ ದೇಶವನ್ನುದ್ದೇಶಿಸಿ ಮಾತನಾಡಿರುವ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಸಹಜ, ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ: ಸೇವೆಗೆ ರಾಜೀನಾಮೆ ನೀಡಿ ತವರು ರಾಜ್ಯಗಳಿಗೆ ಮರಳಿದ 600 ಶುಶ್ರೂಷಕಿಯರು!
ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 600ಕ್ಕೂ ಹೆಚ್ಚು ಶುಶ್ರೂಷಕಿಯರು ಸೇವೆಗೆ ರಾಜೀನಾಮೆ ಸಲ್ಲಿಸಿ ತವರು ರಾಜ್ಯಗಳಿಗೆ ವಾಪಸ್ ಮರಳಿದ್ದು, ಇದರೊಂದಿಗೆ ಕೊರೋನಾವೈರಸ್ ವಿರುದ್ಧದ ಭಾರತದ ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

ಕಮಲ್ ನಾಥ್ ರಾಜೀನಾಮೆ: ತವರಿನತ್ತ ಮುಖ ಮಾಡಿದ ಮ.ಪ್ರದೇಶದ ಬಂಡಾಯ ಶಾಸಕರು
ಕಮಲ್ ನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನ ರೆಸಾರ್ಟ್ ನಲ್ಲಿದ್ದ ಮಧ್ಯಪ್ರದೇಶದ ಬಂಡಾಯ ಶಾಸಕರು ಇದೀಗ ತವರಿಗೆ ತೆರಳಲು ಮುಂದಾಗಿದ್ದಾರೆಂದು ವರದಿಗಳು ತಿಳಿಸಿವೆ.

