Resignation

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!
ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಣ್ಣಾಮಲೈ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಕನ್ನಡಿಗರು ಬಹುಶಃ ಸೂರ್ಯನೇ ಹುಟ್ಟದ ಒಂದು ದಿನ ನೋಡಬಹುದೇನೋ ಆದರೆ, ಕಾಂಗ್ರೆಸ್ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ..!
ಅಧಿಕಾರ ದಾಹವೇ ಕಾಂಗ್ರೆಸ್ ನ ಪರಮೋಚ್ಛ ಉದ್ದೇಶ, ಜನರ ಕಲ್ಯಾಣವಲ್ಲ. ಮೊದಲು ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿದ್ದರು, ಈಗ ಸಚಿವ ಸ್ಥಾನಕ್ಕಾಗಿ, ಖಾತೆಗಾಗಿ ಕಿತ್ತಾಡುತ್ತಿದ್ದಾರೆ.

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? Video
ರಾಮಲಿಂಗಾ ರೆಡ್ಡಿಯವರು ಹಳ್ಳಿಯಲ್ಲಿ ಹೋಗಿ ಕೆಲಸ ಮಾಡಲು ಆಗುವುದಿಲ್ಲ, ಬೇರೆ ಖಾತೆ ಕೊಡಿ ಎಂದು ಕೇಳುತ್ತಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ, ಅವರು ನನಗೆ ತುಂಬಾ ಆತ್ಮೀಯ ಸ್ನೇಹಿತರು ಎಂದರು.

'ಡಿ.ಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ, ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ': ರಾಮಲಿಂಗಾ ರೆಡ್ಡಿ; Video
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, "ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಾನು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ರಾಮಲಿಂಗಾ ರೆಡ್ಡಿ ರಾಜೀನಾಮೆ ವಿಷಯ ವರಿಷ್ಠರ ಗಮನಕ್ಕೆ ತಂದಿದ್ದೇವೆ, ಅವರು ಸಮಸ್ಯೆ ಬಗೆಹರಿಸುತ್ತಾರೆ: ಪ್ರಿಯಾಂಕ್ ಖರ್ಗೆ; Video
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಏನೇ ಭಿನ್ನಾಭಿಪ್ರಾಯವಿದ್ದರೂ ವರಿಷ್ಠರು ಕರೆದು ಮಾತನಾಡಿ ಬಗೆಹರಿಸುತ್ತಾರೆ ಎಂದರು.

ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ; Video
ಡಿ ಕೆ ಶಿವಕುಮಾರ್ ಸಂಪುಟದಲ್ಲಿ ತಾವು ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಕ್ಕಿಲ್ಲ ಎಂದು ನೊಂದು ರಾಮಲಿಂಗಾ ರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಖಾತೆಗಾಗಿ ಫೈಟ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಮಲಿಂಗಾ ರೆಡ್ಡಿ ಮುಂದು!
ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ: ಪ್ರಮೋದಾದೇವಿ ಒಡೆಯರ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆಂದು ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಹಾಗೇನಾದರೂ ಆದಲ್ಲಿ, ನಿರ್ಲಕ್ಷ್ಯ ವಹಿಸಿದಲ್ಲಿ ಜನರು ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಬೇಕು.

Video: 2-3 ದಿನಗಳಿಂದ ಸಿದ್ದರಾಮಯ್ಯರನ್ನು ನೋಡಲು ಆಗುತ್ತಿಲ್ಲ; ರಾಜೀನಾಮೆ ನೆನೆದು ಕಣ್ಣೀರಿಟ್ಟ ಮಾಜಿ ಸಚಿವ ಎಂ.ಸಿ ಸುಧಾಕರ್
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಎಂ.ಸಿ.ಸುಧಾಕರ್ ಅವರು, ಸಿದ್ದರಾಮಯ್ಯ ಅವರನ್ನು ಕಳೆದ ಎರಡ್ಮೂರು ದಿನಗಳಿಂದ ನೋಡಲು ಆಗುತ್ತಿಲ್ಲ. ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದ ನಾಯಕ ಎಂದರು.

