resolution

ಮಣಿಪುರದ ವಿಷಯವಾಗಿ ಯುರೋಪ್ ಸಂಸತ್ ನಲ್ಲಿ ನಿರ್ಣಯ!
ಸ್ಟ್ರಾಸ್ಬೌರ್ಗ್ ನ ಫ್ರೆಂಚ್ ಟೌನ್ ನಲ್ಲಿರುವ ಯುರೋಪಿಯನ್ ಸಂಸತ್ ಮಣಿಪುರದ ವಿಷಯವಾಗಿ ನಿರ್ಣಯ ಕೈಗೊಂಡಿದ್ದು, ಹಿಂಸಾಚಾರವನ್ನು ತಡೆದು ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಭಾರತ ಸರ್ಕಾರಕ್ಕೆ ಕರೆ ನೀಡಿದೆ.

ವಿಶ್ವಸಂಸ್ಥೆ: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ನಿರ್ಣಯ; ದೂರ ಉಳಿದ ಭಾರತ
ಉಕ್ರೇನ್-ರಷ್ಯಾ ಯುದ್ದದ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯ ತತ್ವಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ‘ಸಮಗ್ರ, ನ್ಯಾಯಸಮ್ಮತ ಮತ್ತು ಶಾಶ್ವತ ಶಾಂತಿ’ಯನ್ನು ಆದಷ್ಟು ಬೇಗ ಸ್ಥಾಪಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದ್ದು, ಈ ನಿರ್ಣಯದಿಂದ ಭಾರತ ದೂರ ಉಳಿದಿದೆ.

ಕಳಸಾ-ಬಂಡೂರಿ ವಿಸ್ತೃತ ಯೋಜನೆ ವಿರೋಧಿಸಿ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಕಳಸಾ - ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದನ್ನು ವಿರೋಧಿಸಿ ಗೋವಾ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ದಾಖಲೆಯ ಮೂರನೇ ಅವಧಿಗೂ ಷಿ ಜಿನ್ಪಿಂಗ್ ಚೀನಾ ಅಧ್ಯಕ್ಷ ಗಾದಿಯಲ್ಲಿ ಮುಂದುವರಿಕೆ: ಕಮ್ಯುನಿಸ್ಟ್ ಪಕ್ಷದ ಸಭೆ ಅನುಮೋದನೆ
ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ನ.11 ರಂದು ಮಹತ್ವದ ನಿರ್ಣಯ ಕೈಗೊಂಡಿದ್ದು, ಅಧ್ಯಕ್ಷ ಗಾದಿಯಲ್ಲಿ ದಾಖಲೆಯ ಮೂರನೇ ಅವಧಿಗೆ ಮುಂದುವರೆಯುವುದಕ್ಕೆ ಅನುಮೋದನೆ ನೀಡಿದೆ.

ಕರ್ನಾಟಕದ ಒಂದೇ ಒಂದು ಗ್ರಾಮವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲ್ಲ: ಡಿಕೆ ಶಿವಕುಮಾರ್
ಬೆಳಗಾವಿ ಸುತ್ತಮುತ್ತಲಿನ ಮರಾಠಿ ಭಾಷಿಕರ ಹಳ್ಳಿಗಳನ್ನು ಸೇರಿಸಿಕೊಳ್ಳಲು ಮಹಾರಾಷ್ಟ್ರ ವಿಧಾನಸಭೆ ಅಂಗೀಕರಿಸುವ ನಿರ್ಣಯವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕರ್ನಾಟಕದ ಒಂದೇ ಒಂದು ಗ್ರಾಮವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ವಿಧಾನಸಭೆಯಲ್ಲಿ ಸಿಎಂ ಏಕನಾಥ್ ಶಿಂಧೆ ನಿರ್ಣಯ ಮಂಡನೆ, ಸರ್ವಾನುಮತದ ಅಂಗೀಕಾರ
ಕರ್ನಾಟಕ ಸರ್ಕಾರ ಜೊತೆಗಿನ ಬೆಳಗಾವಿ ಗಡಿ ವಿವಾದ ಕುರಿತು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು.

ಕರ್ನಾಟಕದ ಬಳಿಕ ಈಗ ಗಡಿ ವಿಷಯವಾಗಿ ನಿರ್ಣಯ ಮಂಡಿಸಲು ಮುಂದಾದ ಮಹಾರಾಷ್ಟ್ರ!
ಗಡಿ ವಿಷಯದಲ್ಲಿ ಕರ್ನಾಟಕ ಅಂಗೀಕರಿಸಿದ್ದ ಮಹಾರಾಷ್ಟ್ರ ವಿರುದ್ಧದ ನಿರ್ಣಯದ ಮಾದರಿಯಲ್ಲೇ ಮಹಾರಾಷ್ಟ್ರ ಸಹ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಮುಂದಾಗಿದೆ.

ರಾಹುಲ್ ಗಾಂಧಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿಸಲು ನಿರ್ಣಯ ಅಂಗೀಕರಿಸಿದ ರಾಜಸ್ಥಾನ ಕಾಂಗ್ರೆಸ್
ರಾಹುಲ್ ಗಾಂಧಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಲು ರಾಜಸ್ಥಾನ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.

ದೆಹಲಿ ಅಬಕಾರಿ ನೀತಿ ವಿವಾದ: ತನಿಖಾ ಸಂಸ್ಥೆಗಳ ದುರ್ಬಳಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಆಮ್ ಆದ್ಮಿ ಪಕ್ಷ
ಆಮ್ ಆದ್ಮಿ ಪಕ್ಷದ ಉನ್ನತ ರಾಜಕೀಯ ಸಂಘಟನೆ, ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಬುಧವಾರ ಇ.ಡಿ ಮತ್ತು ಸಿಬಿಐ ದುರ್ಬಳಕೆ ಮತ್ತು ಆಪ್ ಶಾಸಕರಿಗೆ ಕೋಟಿಗಟ್ಟಲೆ ಹಣವನ್ನು ನೀಡುವ ಆಮಿಷವೊಡ್ಡಿರುವುದನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದೆ.

