result

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾವೇ ಗೆದ್ದಿದ್ದು: ಸ್ವಯಂಘೋಷಣೆಗೆ ಮೂರು ಪಕ್ಷಗಳು ಸಜ್ಜು!
ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ, ರಾಜಕೀಯ ಪಕ್ಷಗಳು ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಯಶಸ್ಸು ಪಡೆದಿರುವುದಾಗಿ ತೋರಿಸಿಕೊಳ್ಳಲು ಮುಂದಾಗಿವೆ.

ಗ್ರಾಮ ಪಂಚಾಯಿತಿ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.

ಜನಾದೇಶಕ್ಕೆ ತಲೆಬಾಗಲೇಬೇಕು: ಡಿಕೆ ಶಿವಕುಮಾರ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಜನಾದೇಶಕ್ಕೆ ತಲೆ ಬಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ: ದೇವೇಗೌಡ, ವಿಜಯೇಂದ್ರ, ಡಿಕೆ ಶಿವಕುಮಾರ್ ಸಾಮರ್ಥ್ಯಕ್ಕೆ ಸತ್ವ ಪರೀಕ್ಷೆ!
ನವೆಂಬರ್ 3 ರಂದು ನಡೆದ ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ ಇಂದು ಹೊರ ಬೀಳಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳ ಹಣೆ ಬರಹ ಇಂದು ನಿರ್ಧಾರವಾಗಲಿದೆ.

ಒಕ್ಕಲಿಗ ಸ್ವಾಮೀಜಿಗಳಿಂದ ಡಿಕೆ ಶಿವಕುಮಾರ್ ಭೇಟಿ: ಉಪ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ?
ಒಕ್ಕಲಿಗರ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ, ಇದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರಿಗೆ ಸತ್ವ ಪರೀಕ್ಷೆಯಾಗಿದೆ

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕೆಇಎ ಸ್ಪಷ್ಟನೆ
ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷಾ ಫಲಿತಾಂಶ ಶುಕ್ರವಾರ ಇದೇ 21 ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಸ್ಪಷ್ಟಪಡಿಸಿದೆ.

ಸ್ವಾಬ್ ಪಡೆದ 2 ಗಂಟೆಗಳಲ್ಲಿ ವರದಿ ನೀಡಲು ಆರೋಗ್ಯ ಇಲಾಖೆ ಚಿಂತನೆ
ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಮೂಗು ಮತ್ತು ಗಂಟಲ ದ್ವರದ ಮಾದರಿ ಸಂಗ್ರಹಿಸಿದ ಪರೀಕ್ಷೆಗಳನ್ನು ಶೀಘ್ರಗತಿಯಲ್ಲಿ ನಡೆಸಿ 2 ಗಂಟೆಗೊಳಗಾಗಿ ವೈದ್ಯಕೀಯ ಫಲಿತಾಂಶ ನೀಡುವುದರ ಕುರಿತು ಆರೋಗ್ಯ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ನಾಗರಿಕ ಸೇವಾ ಪರೀಕ್ಷೆಗಳ 2019ರ ಅಂತಿಮ ಫಲಿತಾಂಶ ಪ್ರಕಟ
ನಾಗರಿಕ ಸೇವಾ ಪರೀಕ್ಷೆಗಳ 2019 ರ ಅಂತಿಮ ಫಲಿತಾಂಶವನ್ನು ಕೇಂದ್ರ ಸಾರ್ವಜನಿಕ ಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, 829 ಆಕಾಂಕ್ಷಿಗಳು ಉತ್ತಿರ್ಣರಾಗಿದ್ದಾರೆ.

ಸಿಬಿಎಸ್ಇ 10ನೇ ತರಗತಿ ಫಲಿತಾಂಶ: ರಾಜ್ಯದಲ್ಲಿ ಶೇ.98 ರಷ್ಟು ವಿದ್ಯಾರ್ಥಿಗಳು ಪಾಸ್
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ನಡೆಸಿದ್ದ 10ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದ್ದು, ಶೇ.98ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

