Resumes

ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾದಲ್ಲಿ ವೀಸಾ ಸೇವೆ ಪುನರಾಂಭಿಸಿದ ಭಾರತ!
ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ. ಪ್ರವೇಶ ಸೇರಿದಂತೆ ವ್ಯಾಪಾರ, ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್ ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ಮತ್ತೆ ಸ್ಥಗಿತ
ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ ಪುನರಾರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಡಿಶಾ: ಭೀಕರ ಅಪಘಾತ ಸಂಭವಿಸಿದ 51 ಗಂಟೆ ಬಳಿಕ ರೈಲು ಸಂಚಾರ ಪುನರಾರಂಭ
ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ 275 ಜನರು ಮೃತಪಟ್ಟಿದ್ದ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿಯ ಹಳಿ ಮೇಲಿನ ಅವಶೇಷಗಳ ತೆರವು ಹಾಗೂ ದುರಸ್ಥಿ ಕಾರ್ಯ ಪೂರ್ಣಗೊಂಡಿದ್ದು, ಇದೀಗ ರೈಲುಗಳ ಸಂಚಾರ ಪುನಾರಾರಂಭವಾಗಿದೆ.

ಕೊಲ್ಹಾಪುರ- ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭ
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದದಿಂದ ಸ್ಥಗಿತಗೊಂಡಿದ್ದ ಕೊಲ್ಹಾಪುರ ಮತ್ತು ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭಗೊಂಡಿದೆ. ಸ್ಥಳೀಯ ಪೊಲೀಸರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಶುಕ್ರವಾರದಿಂದ ಭಾಗಶ: ಬಸ್ ಸೇವೆಯನ್ನು ಪುನರ್ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರದುರ್ಗ: ಹರ್ತಿಕೋಟೆ ಗ್ರಾಮದಿಂದ ರಾಹುಲ್ ಸಾರಥ್ಯದ 'ಭಾರತ್ ಜೋಡೋ ಯಾತ್ರೆ' ಆರಂಭ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದಿಗೆ ಹನ್ನೇರಡನೇ ದಿನಕ್ಕೆ ಕಾಲಿಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹರ್ತಿಕೋಟೆ ಗ್ರಾಮದಿಂದ ಸಾಣಿಕೆರೆ ಕಡೆಗೆ ಯಾತ್ರೆ ಸಾಗುತ್ತಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಪಾರ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಅಭಿಮಾನಿಗಳು ಹೆಜ್ಜೆ ಹಾಕುತ್ತಿದ್ದಾರೆ.

ಅಮರನಾಥ ಯಾತ್ರೆ ಪುನರಾರಂಭ: ಮೊಳಗಿದ 'ಬಂ ಬಂ ಭೋಲೆ'!
ಜಮ್ಮುವಿನ ಭಗವತಿ ನಗರದಲ್ಲಿರುವ ಯಾತ್ರಿ ನಿವಾಸ ಬೇಸ್ ಕ್ಯಾಂಪ್ ನಿಂದ ಅಮರನಾಥ ಯಾತ್ರೆ ಪುನರಾರಂಭಗೊಂಡಿದೆ. ಶುಕ್ರವಾರ ಸಂಜೆ ಅಮರನಾಥ ಗುಹೆ ಬಳಿ ಭಾರೀ ವರ್ಷಧಾರೆಯಿಂದಾಗಿ ತಾತ್ಕಾಲಿಕವಾಗಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಜಲಪ್ರಳಯ: ಸಹಜ ಸ್ಥಿತಿಯತ್ತ ಚೆನ್ನೈ ವಿಮಾನ ನಿಲ್ದಾಣ
ಕುಂಭದ್ರೋಣ ಮಳೆಯಿಂದ ಅಕ್ಷರ ಸಹ ಕೆರೆಯಂತಾಗಿದ್ದ ಚೆನ್ನೈ ವಿಮಾನ ನಿಲ್ದಾಣ ನಿಧಾನವಾಗಿ ಚೆತರಿಸಿಕೊಳ್ಳುತ್ತಿದ್ದು, ಶೀಘ್ರವೇ ವಾಣಿಜ್ಯ ವಿಮಾನಗಳ...

