Revanth Reddy

ಬಲಿಷ್ಠ ಬಿಆರ್ ಎಸ್, ಮಹತ್ವಾಕಾಂಕ್ಷಿ ಬಿಜೆಪಿ ಎದುರು ಅದಮ್ಯ ಹೋರಾಟ: ತೆಲಂಗಾಣದ ಕಾಂಗ್ರೆಸ್ ಹೀರೋ ರೇವಂತ್ ರೆಡ್ಡಿ!
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ(TPCC) ಅಧ್ಯಕ್ಷ ಅನುಮುಲಾ ರೇವಂತ್ ರೆಡ್ಡಿ ಪ್ರಚಲಿತದಲ್ಲಿ ದೇಶದ ರಾಜಕೀಯದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು. ತೆಲಂಗಾಣ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ಸ್ವೀಕರಿಸುತ್ತಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿ
ತೆಲಂಗಾಣ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಒಂದು ದಿನದ ನಂತರ ಬುಧವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು.

ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ, ಗುರುವಾರ ಪ್ರಮಾಣವಚನ
ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರನ್ನು ಕಾಂಗ್ರೆಸ್ ಮಂಗಳವಾರ ಅಧಿಕೃತವಾಗಿ ಆಯ್ಕೆ ಮಾಡಿದ್ದು, ಗುರುವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಿರ್ಧಾರವಾಗಿದೆ ಎಂದ ರಾಹುಲ್ ಗಾಂಧಿ; ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ!
ತೆಲಂಗಾಣ ಕಾಂಗ್ರೆಸ್ (Telangana Congress) ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ (Anumula Revanth Reddy) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, “ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ತೆಲಂಗಾಣ: ಭಾವಿ, ನಿರ್ಗಮಿತ ಸಿಎಂ ಇಬ್ಬರು ಘಟಾನುಘಟಿಗಳನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕೆವಿಆರ್!
4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ.

CM KCR Resign: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ. ಚಂದ್ರಶೇಖರ್ ರಾವ್
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ತೆಲಂಗಾಣ ಫಲಿತಾಂಶ: 'ಬಿಜೆಪಿಯ ವ್ಯಕ್ತಿ' ಸಿಎಂ ಆಗ್ತಾರಾ? ಕಾಂಗ್ರೆಸ್ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಹಿನ್ನಲೆ!
ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಚಂದ್ರಶೇಖರ ರಾವ್ ಅವರ ಪಕ್ಷ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ತೀರಾ ಹಿಂದುಳಿದಿದೆ.

ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ
ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ಭಾರಿ ಭದ್ರತೆಯ ನಡುವೆ ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ತೆಲಂಗಾಣ: ಕೆಸಿಆರ್‌ಗೆ 4 ಸಾವಿರ ರೂ. ವೃದ್ಧಾಪ್ಯ ವೇತನ, ಜೈಲಿನಲ್ಲಿ 2BHK ಮನೆ ನೀಡಲಾಗುವುದು- ರೇವಂತ್ ರೆಡ್ಡಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ 4,000 ರೂ. ವೃದ್ಧಾಪ್ಯ ವೇತನ ನೀಡಲಾಗುವುದು ಮತ್ತು ಚೆರ್ಲಪಲ್ಲಿ ಕೇಂದ್ರ ಕಾರಾಗೃಹದಲ್ಲಿ ಅವರಿಗೆ 2 BHK ಮನೆ ನಿರ್ಮಿಸಿಕೊಡುವುದಾಗಿ ಟಿಪಿಸಿಸಿ ಮುಖ್ಯಸ್ಥ ಎ ರೇವಂತ್ ರೆಡ್ಡಿ ಗುರುವಾರ ಹೇಳಿದ್ದಾರೆ.

