ರಾಜಕೀಯಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಮೋದಿಗೆ ಸಿಎಂ ಸಿದ್ದು ಪ್ರಶ್ನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ, ಕೇಂದ್ರ ಸರ್ಕಾರದ ಸಹಯೋಗದ ವಿವಿಧ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.