ರಾಜ್ಯಬೆಂಗಳೂರು: 2,602 ಎಕರೆ ಒತ್ತುವರಿ ಭೂಮಿಯನ್ನು ವಶಪಡಿಸಿಕೊಂಡ ಅರಣ್ಯ ಇಲಾಖೆ
ಅರಣ್ಯ ಇಲಾಖೆಯ ಆದಾಯ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, 2019-20ರಲ್ಲಿ 263.41 ಕೋಟಿ ರೂ.ಗಳಷ್ಟಿದ್ದ ಆದಾಯ 2023-24ರಲ್ಲಿ 417.84 ಕೋಟಿ ರೂ.ಗೆ ಏರಿಕೆಯಾಗಿದೆ. ಇದರೊಂದಿಗೆ ಅತಿಕ್ರಮಣ ಮಾಡಿದ್ದ 2602.30 ಎಕರೆ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮಂಗಳವಾರ ಹೇಳಿದ್ದಾರೆ.