ದೇಶಸಿಬಿಎಸ್ ಇ 10 ಹಾಗು 12ನೇ ತರಗತಿ ಪರೀಕ್ಷಾ ವೇಳಾ ಪಟ್ಟಿ ಬಿಡುಗಡೆ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 10- 12ನೇ ತರಗತಿ ಹೊಸ ಪರೀಕ್ಷಾ ವೇಳಾ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಿದೆ. ಜುಲೈ 1ರಿಂದ 15 ವರೆಗೆ 10-12ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂಬ ನಿಬಂಧನೆ ವಿಧಿಸಲಾಗಿದೆ.