ರಾಜ್ಯಪರಿಷ್ಕೃತ ರೂಪದಲ್ಲಿ 'ವಿದ್ಯಾಗಮ' ಅನುಷ್ಠಾನ- ಸುರೇಶ್ ಕುಮಾರ್
ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.