ದೇಶಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್
ಉತ್ತರಪ್ರದೇಶದ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ 2024ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.