Rishab Shetty

ಅಶುತೋಷ್ ಗೋವರಿಕರ್ ಭೇಟಿಯಾದ ರಿಷಬ್ ಶೆಟ್ಟಿ: 'ಲಗಾನ್’ ಡೈರೆಕ್ಟರ್ ಸಿನಿಮಾದಲ್ಲಿ 'ಕಾಂತಾರ ಶಿವ'?
ನಟ ರಿಷಬ್ ಶೆಟ್ಟಿ - ಲಗಾನ್ ನಿರ್ದೇಶಕ ಅಶುತೋಷ್ ಗೋವರಿಕರ್ ಜೊತೆ ಮುಂಬೈನ ಅವರ ಕಚೇರಿಯ ಮುಂದೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿರುವ ಸ್ಪಷ್ಟ ಸುಳಿವು ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಯಶ್, ಪ್ರಭಾಸ್, ರಿಷಬ್ ಶೆಟ್ಟಿಗೆ ಆಹ್ವಾನ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಲೋಕಾರ್ಪಣೆಗೆ ರಾಮಮಂದಿರ ಸಜ್ಜುಗೊಂಡಿದೆ. ಜನವರಿ 22 ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಮುಖ ರಾಜಕೀಯ ನಾಯಕರು, ಕ್ರೀಡೆ ಹಾಗೂ ಚಿತ್ರರಂಗ ಸೇರಿ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ.

Kantara- Chapter 1: ಕಾಂತಾರ ಆಡಿಷನ್‌ಗೆ ಬರೋಬ್ಬರಿ 25 ಸಾವಿರ ಅರ್ಜಿ, ಆಯ್ಕೆಯಾದವರೆಷ್ಟು?
ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಂಡ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಂತಾರ- ಅಧ್ಯಾಯ 1ರ ನಿರ್ದೇಶನ ವಿಭಾಗಕ್ಕಾಗಿ ಭಾರತದಾದ್ಯಂತ ಸಲ್ಲಿಕೆಯಾಗಿದ್ದ 1000 ಅರ್ಜಿಗಳಲ್ಲಿ 15ಕ್ಕೂ ಹೆಚ್ಚು ವ್ಯಕ್ತಿಗಳನ್ನು ಇತ್ತೀಚೆಗೆ ಅಂತಿಮಗೊಳಿಸಿದೆ. ರಿಷಬ್ ಶೆಟ್ಟಿ ಅಭಿನಯದ ಈ ಚಿತ್ರವು ಇನ್ನೂ ತನ್ನ ಕಾಸ್ಟಿಂಗ್ ಅನ್ನು ಪೂರ್ಣಗೊಳಿಸಿಲ್ಲ.

ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್ ಶೆಟ್ಟಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

'ಕಾಂತಾರ' ಗೆ ಅಂತರರಾಷ್ಟ್ರೀಯ ವಿಶೇಷ ಪ್ರಶಸ್ತಿ: ಶಂಕರ್ನಾಗ್ಗೆ ಸಮರ್ಪಿಸಿದ ರಿಷಬ್ ಶೆಟ್ಟಿ!
ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.

ಗೋವಾ ಸಿನಿಮೋತ್ಸವದಲ್ಲಿ ಕಾಂತಾರಕ್ಕೆ ಮತ್ತೊಂದು ಗರಿ: ವಿಶೇಷ ತೀರ್ಪುಗಾರರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
ಗಲ್ಲಾಪಟ್ಟಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಕಾಂತಾರ ಚಿತ್ರಕ್ಕೆ ಇದೀಗ ಮತ್ತೊಂದು ಪ್ರಶಸ್ತಿ ಗರಿ ಸಿಕ್ಕಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಭಾರತೀಯ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರಕ್ಕಾಗಿ ವಿಶೇಷ ತೀರ್ಪುಗಾರರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕನ್ನಡ ಚಿತ್ರರಂಗಕ್ಕೆ ಮುಕ್ತವಾಗಿಲ್ಲ: 'ಕಾಂತಾರ' ನಟ ರಿಷಬ್ ಶೆಟ್ಟಿ
ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕನ್ನಡ ಚಿತ್ರೋದ್ಯಮಕ್ಕೆ ಮುಕ್ತವಾದ ಅವಕಾಶಗಳನ್ನು ನೀಡುತ್ತಿಲ್ಲ ಎಂದು 'ಕಾಂತಾರ' ಸ್ಟಾರ್ ರಿಷಬ್ ಶೆಟ್ಟಿ ಅವರು ಮಂಗಳವಾರ ಗೋವಾದಲ್ಲಿ ಹೇಳಿದ್ದಾರೆ.

'ಕಾಂತಾರ' ಯಶಸ್ಸಿನ ನಂತರ ರಿಷಬ್ ಶೆಟ್ಟಿ ಜೀವನವೇ ಬದಲಾಯಿತಂತೆ; ನಟ ಹೇಳಿದ್ದೇನು?
ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ಪ್ಯಾನ್-ಇಂಡಿಯಾ ಸಿನಿಮಾ 'ಕಾಂತಾರ'ದ ಬೃಹತ್ ಯಶಸ್ಸಿನ ನಂತರ ತಮ್ಮ ಜೀವನ ಹೇಗೆ ಬದಲಾಯಿತು ಎಂಬುದರ ಕುರಿತು ಮಂಗಳವಾರ ಮಾಹಿತಿ ನೀಡಿದ್ದಾರೆ.

ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ-ಚಾಪ್ಟರ್ 1 ಚಿತ್ರದ ಫರ್ಸ್ಟ್ ಲುಕ್ ಟೀಸರ್
ಬಹು ನಿರೀಕ್ಷಿತ ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ಕಾಂತಾರಾ (ಒಂದು ದಂತಕಥೆ) ಭಾಗ-1ಚಿತ್ರದ ಫರ್ಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿನ ರಿಷಬ್ ಶೆಟ್ಟಿ ಪಾತ್ರದ ಕುರಿತು ಇಲ್ಲಿ ಬೆಳಕು ಚೆಲ್ಲಲಾಗಿದೆ.

