road accident

ವಿಜಯಪುರ: ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ದುರ್ಮರಣ
ಮುದ್ದೇಬಿಹಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

SIR ಸಂಬಂಧಿತ ಕೆಲಸಕ್ಕಾಗಿ ರಜೆಯ ಮೇಲೆ ಊರಿಗೆ ಮರಳಿದ್ದಾಗ ರಸ್ತೆ ಅಪಘಾತ; CISF ಯೋಧ ಸಾವು
ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿ ಸೀತಾರಾಮ ಗೌಡ ಎಂದು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು.

ಚಾಮರಾಜನಗರ: ಟೈಯರ್ ಸ್ಫೋಟಗೊಂಡು ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು, 50 ಮಂದಿಗೆ ಗಾಯ
ಟೈಯರ್ ಸ್ಪೋಟಗೊಂಡು KSRTC ಬಸ್ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಬೈಪಾಸ್ ಬಳಿ ನಡೆದಿದೆ.

ತುಮಕೂರು: ಹೊಸ ಬೈಕ್ ಖರೀದಿಸಿದ ಸಂಭ್ರಮ; ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಯುವಕ ದುರ್ಮರಣ
ಹೊಸ ಬೈಕ್ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.

ಸಿದ್ಧನಾಥ ದೇವಸ್ಥಾನದಿಂದ ಹಿಂತಿರುಗುತ್ತಿದ್ದ ವೇಳೆ ಬಾವಿಗೆ ಬಿದ್ದ ಪಿಕಪ್ ವಾಹನ, 8 ಜನರ ಸಾವು!
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪಿಕಪ್ ಟ್ರಕ್ ಬಾವಿಗೆ ಬಿದ್ದು ಎಂಟು ಜನರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಆರು ಮಂದಿಯನ್ನು ರಕ್ಷಿಸಿದ್ದಾರೆ.

ಬೆಂಗಳೂರು: ಐಷಾರಾಮಿ ಕಾರು ಮರ್ಸಿಡಿಸ್ ಬೆಂಜ್ ಡಿವೈಡರ್ಗೆ ಡಿಕ್ಕಿ; ಯುವತಿ ಸಾವು, ಚಾಲಕ ಪರಾರಿ!
ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ, ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ: ಆಂಧ್ರದ ಒಂದೇ ಕುಟುಂಬದ ಮೂವರು ಸೇರಿ 7 ಮಂದಿ ದುರ್ಮರಣ!
ತುಮಕೂರು, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ಏಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ; 5 ಮಂದಿ ಸಾವು
ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

