road accident

ಬೈಕ್ ಮೇಲೆ ಪತ್ನಿ ಶವ ಸಾಗಿಸಿದ ದೃಶ್ಯ: HitAndRun ಟ್ರಕ್ ಚಾಲಕನ ಬಂಧಿಸಲು ಪೊಲೀಸರಿಗೆ AI ನೆರವು!
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನಾಗಪುರ ಪೊಲೀಸರು ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

Dharwad: ಕಾಲೇಜು ಕಾಂಪೌಂಡ್‌ಗೆ BRTS ಬಸ್ ಡಿಕ್ಕಿ; ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ!
ಹುಬ್ಬಳ್ಳಿ-ಧಾರವಾಡ ಬಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (HDBRTS) 'ಚಿಗರಿ' ಬಸ್ ಧಾರವಾಡದ ಜೆಎಸ್‌ಎಸ್ ಕಾಲೇಜಿನ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ಬೈಕ್-ಲಾರಿ ಅಪಘಾತ; ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಬಂದಿದ್ದ ನವ ವಿವಾಹಿತೆ ಸಾವು; ಸುದ್ದಿ ಕೇಳಿ ಅಜ್ಜಿಯೂ ನಿಧನ!
ಗೀತಾ (23) ಮೃತಪಟ್ಟ ದುರ್ದೈವಿ. ಲಗ್ಗೆರೆ ಬ್ರಿಡ್ಜ್ ಬಳಿ ಅವರು ತೆರಳುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಗೀತಾ ಅವರ ತಲೆಗೆ ತೀವ್ರವಾದ ಗಾಯಗಳಾಗಿ, ಸ್ಥಳದಲ್ಲೇ ಅವರು ಕೊನೆಯುಸಿರೆಳೆದರು.

Mumbai-Pune Expressway ಭೀಕರ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿದ ಟ್ರಕ್; ಮಹಿಳೆ ಸಾವು, 20 ಮಂದಿಗೆ ಗಾಯ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಟ್ರಕ್ ಒಂದು 18 ರಿಂದ 20 ವಾಹನಗಳಿಗೆ ಗುದ್ದಿದೆ. ಅಪಘಾತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು 19 ರಿಂದ 20 ಜನರು ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶ: ರಸ್ತೆ ಅಪಘಾತದಲ್ಲಿ ಇಬ್ಬರು DYSp ಗಳು ಸಾವು; ಇಬ್ಬರು ಅಧಿಕಾರಿಗಳಿಗೆ ಗಾಯ
ಹೈದರಾಬಾದ್ ಬಳಿಯ ಚೌಟುಪ್ಪಲ್‌ನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಮಡಿಕೇರಿ: ಟ್ರಕ್-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ
ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತ: ಆರು ತಿಂಗಳ ಅವಧಿಯಲ್ಲಿ 27,000 ಜನರು ಸಾವು; ನಿತಿನ್ ಗಡ್ಕರಿ
ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, 2024ರಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ (ಎನ್‌ಎಚ್) 52,609 ಮಾರಕ ಅಪಘಾತಗಳು ಸಂಭವಿಸಿವೆ ಎಂದು ಹೇಳಿದರು.

ತುಮಕೂರು: ಬೈಪಾಸ್‌ನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ; ದಂಪತಿ, ಮಕ್ಕಳು ಸೇರಿ ನಾಲ್ವರ ದುರ್ಮರಣ
ಯೂಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಾರ್ಖಂಡ್: ಬೊಲೆರೊ-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 9 ಮಂದಿ ಸಾವು
ಇಂದು ಬೆಳಗ್ಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯಲ್ಲಿ ಈ ಅಪಘಾತ ನಡೆದಿದ್ದು, ಬೊಲೆರೊದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

