ರಾಜ್ಯಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮೈಸೂರು, ಶಿರಾಡಿ ಘಾಟ್ ಸೇರಿ 12 ಯೋಜನೆಗಳ ಮಂಜೂರಾತಿಗೆ ಮನವಿ
ದೆಹಲಿಯಲ್ಲಿ ಕೇಂದ್ರ ರಸ್ತೆ, ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಮುಖ್ಯಮಂತ್ರಿ, ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವುದಕ್ಕಾಗಿ ರಾಜ್ಯದ ಪರವಾಗಿ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.