road show

ಲೋಕಸಭಾ ಚುನಾವಣೆ 2024: ರಾಜ್ಯದಲ್ಲಿಂದು ಅಮಿತ್ ಶಾ ಚುನಾವಣಾ ರಣಕಹಳೆ, ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ಚಾಣಕ್ಯ
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣೆಯಲ್ಲಿ ಗೆಲ್ಲಲು ಈ ಬಾರಿ ಎಲ್ಲಾ ರಾಜಕೀಯ ಪಕ್ಷಗಳು ತಂತ್ರಗಳನ್ನು ಹೂಡುತ್ತಿವೆ. ಈತನ್ಮಧ್ಯೆ ಕರ್ನಾಟಕದಲ್ಲಿ ಎಲ್ಲಾ 28 ಸ್ಥಾನಗಳನ್ನೂ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದೆ. ಇದರ ಭಾಗವಾಗಿ ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಅಯೋಧ್ಯಾ ಧಾಮ್ ರೈಲು ನಿಲ್ದಾಣ' ಉದ್ಘಾಟನೆ: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ
ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಇಂದು ಶನಿವಾರ ಅಯೋಧ್ಯೆಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಉದ್ಘಾಟನೆ ಮಾಡಿದರು. ನಂತರ ಉತ್ತರ ಪ್ರದೇಶದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದು ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆ ಹೊರತು ಪಕ್ಷದ ಸಭೆಗಲ್ಲ: ಬಿಜೆಪಿ ತಿರುಗೇಟು
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಇಸ್ರೋ ಕಚೇರಿಯಿರುವ ಪೀಣ್ಯದವರೆಗೂ ತೆರೆದ ಕಾರಿನಲ್ಲಿ ಸಾಗುವ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ ಜನತೆಯತ್ತ ಕೈ ಬೀಸುತ್ತಾ ಸಾಗಿದರು.

ನಾಳೆ ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ ಇಲ್ಲ, ರಾಜ್ಯದ ಅಣೆಕಟ್ಟಿನಲ್ಲಿ ಎಷ್ಟು ನೀರಿದೆ ಎಂದು ಶ್ವೇತಪತ್ರ ಹೊರಡಿಸಬೇಕು: ಶೋಭಾ ಕರಂದ್ಲಾಜೆ
ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲಿ ಗ್ರೀಸ್ ದೇಶದಿಂದ ನೇರವಾಗಿ ನಾಳೆ ಬೆಳಗ್ಗೆ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿಯವರಿಂದ ಇಸ್ರೊ ಕಚೇರಿಗೆ ಭೇಟಿ ನೀಡಿ ಅಲ್ಲಿನ ವಿಜ್ಞಾನಿಗಳನ್ನು ಮಾತನಾಡಿಸಿದ ಬಳಿಕ ರೋಡ್ ಶೋ ಇದೆ ಎಂಬ ಸುದ್ದಿ ಹರಡಿತ್ತು.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅದ್ಧೂರಿ ಸ್ವಾಗತಕ್ಕೆ ಬೆಳಗಾವಿ ಸಜ್ಜು
ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಮೋದಿ ರೋಡ್ ಶೋ: ಮರಗಳ ತೆರವುಗೊಳಿಸಿದ ಬಿಬಿಎಂಪಿ, ಆಕ್ರೋಶ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ತೆರಳುವ ರಸ್ತೆಗಳಲ್ಲಿ ಇದ್ದ ಮರಗಳ ಕೊಂಬೆಗಳನ್ನು ಬಿಬಿಎಂಪಿ ಕತ್ತರಿಸಿದ್ದು, ಅಧಿಕಾರಿಗಳ ಈ ಕ್ರಮದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಬೆಂಗಳೂರು ಆಳಲು ಜಿದ್ದಿಗೆ ಬಿದ್ದ ಕೇಸರಿ ಪಡೆಗಳು: 'ಮಿಷನ್ 20' ಗುರಿಗೆ ಮೋದಿ ರೋಡ್ ಶೋ ನೆರವಾಗುವ ವಿಶ್ವಾಸ!
ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್‌ಶೋ ನಗರದ ಅರ್ಧದಷ್ಟು ಭಾಗವನ್ನು ಆವರಿಸಿದ್ದು, ಬೆಂಗಳೂರಿನಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುವ ಮತ್ತು ರಾಜ್ಯ ರಾಜಧಾನಿಯ 28ರ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿ ಮುಟ್ಟುವ ನಿರೀಕ್ಷೆಯಲ್ಲಿದೆ.

ರೋಡ್ ಶೋ ನಡೆಸುವ ಮೋದಿಯವರಿಗೆ ಬೆಂಗಳೂರು ರಸ್ತೆಗಳ ದುಃಸ್ಥಿತಿ ಬಗ್ಗೆ ತಿಳಿಯಲಿದೆ: ನಟಿ ರಮ್ಯಾ
ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಹೇಳಿರುವ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಪ್ರಚಾರ ವೇಳೆ ವೇಳೆ ಮೋದಿಯವರಿಗೆ ರಾಜಧಾನಿಯ ಹದಗೆಟ್ಟ ರಸ್ತೆಗಳ ಬಗ್ಗೆ ತಿಳಿಯಲಿದ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ 'ನಮೋ' ಎರಡನೇ ಮೆಗಾ ರೋಡ್ ಶೋ: ಹನುಮಾನ್ ಚಾಲೀಸ್ ಪಠಣ, ಎಲ್ಲೆಲ್ಲೂ ಮೋದಿ ಪರ ಜೈಕಾರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡನೇ ದಿನವೂ ಮೋದಿ ಹವಾ ಜೋರಾಗಿದೆ. ನ್ಯೂ ತಿಪ್ಪಸಂದ್ರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದೆ...

