road show

ಬಿಜೆಪಿ ರೋಡ್'ಶೋ: ಸಂಚಾರ ಅಸ್ತವ್ಯಸ್ತ, ಪ್ರಧಾನಿ ಮೋದಿಯನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದ ಕಾಂಗ್ರೆಸ್
ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದು, ರೋಡ್ ಶೋ ಪರಿಣಾಮ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದಿದೆ.

ಮೋದಿ ರೋಡ್ ಶೋ: 'ಕಮಲಾಧಿಪತಿ'ಗೆ ಹೂವಿನ ಸುರಿಮಳೆ, ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ ಜನ-ಎಲ್ಲೆಡೆ 'ನಮೋ' ಜಪ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಮತದಾರರ ಮನಗೆಲ್ಲಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಗರದಲ್ಲಿ ಶನಿವಾರ ರೋಡ್ ಶೋ ನಡೆಸಿದರು.

ಬೆಂಗಳೂರಿಗೆ ಬಂದಿರುವುದು ಕೊರೋನಾ ವೈರಸ್ಸಾ ಅಥವಾ ಮೋದಿನಾ?: ಕಾಂಗ್ರೆಸ್
ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುತ್ತಿದ್ದು, ಈ ನಡುವಲ್ಲೇ ಪೊಲೀಸರ ಸೂಚನೆಗಳ ಕುರಿತು ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.

ಶನಿವಾರ-ಭಾನುವಾರ ಬೆಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ: ನೀಟ್ ಪರೀಕ್ಷೆ ಹಿನ್ನೆಲೆ ಬದಲಾವಣೆ; ಇಲ್ಲಿದೆ ಮಾಹಿತಿ...!
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಮತದಾರರ ಮೇಲೆ ಕಣ್ಣಿಟ್ಟಿರುವ ಭಾರತೀಯ ಜನತಾ ಪಕ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ನಾಳೆ ಮತ್ತು ನಾಡಿದ್ದು ವಾರಾಂತ್ಯ ಎರಡು ದಿನ ರೋಡ್ ಶೋ ಆಯೋಜಿಸಿದೆ. ಈ ಸಂದರ್ಭದಲ್ಲಿ ಸಂಚಾರದಲ್ಲಿ ಹಲವು ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ 2 ದಿನ ಪ್ರಧಾನಿ ಮೋದಿ ರೋಡ್ ಶೋ: 18 ಕ್ಷೇತ್ರಗಳಲ್ಲಿ ಪ್ರಚಾರ, ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಮೇ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಲ್ಲಿ ರಾಜಧಾನಿಯ 18 ಕ್ಷೇತ್ರಗಳಲ್ಲಿ 36.6 ಕಿ.ಮೀ. ದೂರ ಬೃಹತ್ ರೋಡ್ ಶೋ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಶೋಭಾ ಕರಂದ್ಲಾಜೆ ಅವರೇ ಶೂರ್ಪನಖಿ ಆಗಬೇಡಿ, ಸೀತಾಮಾತೆಯಾಗಿ: ಆ್ಯಂಬುಲೆನ್ಸ್ ವಿಚಾರಕ್ಕೆ ರಮೇಶ್ ಬಾಬು ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಕಾಂಗ್ರೆಸ್‌ನವರು ಆಂಬ್ಯುಲೆನ್ಸ್ ಬಿಟ್ಟು ತೊಂದರೆ ಕೊಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಕ್ಕೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ತಿರುಗೇಟು ನೀಡಿದ್ದಾರೆ

ಮೇ 6 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ 36 ಕಿ.ಮೀ ಮೆಗಾ ರೋಡ್ ಶೋ, ವಾಹನ ಸವಾರರೇ ಜಾಗ್ರತೆ!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೇ 6 ರಂದು ಶನಿವಾರ ಬೆಂಗಳೂರಿನಲ್ಲಿ 'ನಮ್ಮ ಕರ್ನಾಟಕ ಯಾತ್ರೆ ಹೆಸರಿನಡಿ ಒಟ್ಟು 36.6 ಕಿ ಮೀ ದೂರ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ: ಪ್ರಧಾನಿ ಮೋದಿ, ಶಾ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು.

ಮೈಸೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ವೇಳೆ ತೂರಿಬಂದ ಮೊಬೈಲ್! ವಿಡಿಯೋ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮೈಸೂರಿನಲ್ಲಿ ರೋಡ್ ಶೋ ನಡೆಸುವಾಗ ಜನರ ಗುಂಪಿನಿಂದ ಮೊಬೈಲ್ ಒಂದು ತೂರಿಬಂದಿದೆ.

