road show

ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ತಿರಸ್ಕರಿಸಿ: ಮತದಾರರಿಗೆ ಅಮಿತ್ ಶಾ ಕರೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಮತದಾರರನ್ನು ಒತ್ತಾಯಿಸಿದ್ದಾರೆ. ಅಲ್ಲದೇ, ಜಿಲ್ಲೆಯಲ್ಲಿ ಕನಿಷ್ಠ ನಾಲ್ವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ರೋಣದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ಚುನಾವಣೆ ಮೂಲಕ ಕರ್ನಾಟಕ ವಿಧಾನಸಭೆ ಪ್ರವೇಶಿಸುವ ಕನಸು ಕಂಡಿದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನಾಲ್ಕನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದೆ.

ಮಂಡ್ಯ: ಪ್ರಧಾನಿ ರೋಡ್ ಶೋ ಮಾರ್ಗದಲ್ಲಿ ಅಳವಡಿಸಲಾಗಿದ್ದ ಉರಿಗೌಡ- ದೊಡ್ಡ ನಂಜೇಗೌಡ ಮಹಾದ್ವಾರದ ಹೆಸರು ರಾತ್ರೋರಾತ್ರಿ ತೆರವು!
ಪ್ರಧಾನಿ ನರೇಂದ್ರ ಮೋದಿ ಮಾ.12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಜನತೆ ಕಿಕ್ಕಿರಿದು ಸೇರಿದ್ದರು.

ಮೋದಿ ರೋಡ್ ಶೋ ತಂತ್ರಕ್ಕೆ ದೇವೇಗೌಡರಿಂದ ಪ್ರತಿತಂತ್ರ: ರಣರಂಗವಾಗಿ ಬದಲಾಗಲಿದೆ ಹಳೇ ಮೈಸೂರು ಭಾಗ!
ಹಳೇ ಮೈಸೂರ ಭಾಗದ ಮೇಲೆ ಬಿಜೆಪಿ ಕಣ್ಣಿದ್ದು, ಮಾ.12ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೋಡ್ ಶೋಗೆ ನಡೆಸುತ್ತಿರುವ ತಂತ್ರಕ್ಕೆ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪ್ರತಿತಂತ್ರ ರೂಪಿಸಿ, ಕೌಂಟರ್ ನೀಡಿದ್ದಾರೆ.

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ, ಜನಸಾಗರ!
ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದರು. ಚೆನ್ನಮ್ಮ ವೃತ್ತದಿಂದ ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ಪೊಲೀಸ್ ಬಿಗಿ ಭದ್ರತೆಯಲ್ಲಿ ಮೋದಿ ರೋಡ್ ಶೋ ನಲ್ಲಿ ಪಾಲ್ಗೊಂಡರು.

ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಬೆಳಗಾವಿ ತಲುಪಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ
ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಬೆಳಗಾವಿಗೆ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಕೇಸರಿ ಬಣ್ಣ ಹೊದ್ದು ಸಿಂಗಾರಗೊಳ್ಳುತ್ತಿದೆ ಬೆಳಗಾವಿ
ಫೆಬ್ರುವರಿ 27 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಮೆಗಾ ರೋಡ್ ಶೋಗಾಗಿ ಬೆಳಗಾವಿ ನಗರವನ್ನು ಅಲಂಕರಿಸಲಾಗಿದೆ. ಬೆಳಗಾವಿ ನಗರದ 8 ಕಿಮೀ ವ್ಯಾಪ್ತಿಯಲ್ಲಿ ಶಾಂತಿಯುತ ರೋಡ್ ಶೋ ನಡೆಸಲು ಕಳೆದ ಎರಡು ದಿನಗಳಿಂದ ಬೃಹತ್ ಭದ್ರತಾ ವ್ಯವಸ್ಥೆಯನ್ನು ಸಿದ್ಧಪಡಿಸಲಾಗಿದೆ.

ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಇಲ್ಲ ಎಂದರೆ ರಾಜ್ಯದ ಜನರ ಪರಿಸ್ಥಿತಿಯೇನಿರಬಹುದು?; ಡಿ.ಕೆ.ಶಿವಕುಮಾರ್
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಿಂದಾಗಿ ಪುತ್ತೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದು ಮಾಡಲಾಗಿದೆ. ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ, ರಾಜ್ಯಜ ಜನರ ಪರಿಸ್ಥಿತಿ ಹೇಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಶನಿವಾರ ಪ್ರಶ್ನಿಸಿದ್ದಾರೆ.

ಪ್ರಧಾನಿ ರೋಡ್ ಶೋ ವೇಳೆ ಭದ್ರತಾ ಲೋಪ: ಮೋದಿಗೆ ಹಾರ ಹಾಕಲು ಯತ್ನಿಸಿದ ಯುವಕ! ವಿಡಿಯೋ
ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡಲು ಗುರುವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿರುವಾಗ ಭದ್ರತಾ ಲೋಪವಾಗಿದೆ.

