ರಾಜ್ಯಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯದಲ್ಲಿ ಇದೇ ಶನಿವಾರ, ಭಾನುವಾರ ಪ್ರಧಾನಿ ಮೋದಿ ಎರಡು ರೋಡ್ ಶೋ, 6 ಸಾರ್ವಜನಿಕ ಸಭೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರಕ್ಕೆ ಉತ್ತೇಜನ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರಾಂತ್ಯದಲ್ಲಿ ಎರಡು ಬೃಹತ್ ರೋಡ್ಶೋಗಳು ಮತ್ತು ಆರು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.