Rowdy sheeter

ಧಾರವಾಡ: ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ; ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಬಂಧನ
ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸಿ ಶನಿವಾರ ಕೈಯಲ್ಲಿ ತಲವಾರು ಹಿಡಿದು ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ಕಾಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್ ರಫೀಕ್ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ಆತನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಿತ್ತು.

ರೌಡಿ ಶೀಟರ್‌ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್: 'ಕೊತ್ವಾಲನ ಶಿಷ್ಯರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ!'
ರೌಡಿ ಶೀಟರ್‌ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ.

ಬೆಂಗಳೂರು: ಎದುರಾಳಿಯ ಹತ್ಯೆಗೈಯಲು ಹೋಗಿ ಅವಾಂತರ; ಮಹಿಳೆಯ ಕೈ ಕತ್ತರಿಸಿದ ರೌಡಿಶೀಟರ್!
ಮಹಿಳೆ ಕೈ ಕತ್ತರಿಸಿದ್ದ ರೌಡಿಶೀಟರ್ನನ್ನು ಸುಬ್ರಮಣ್ಯನಗರ ಪೊಲೀಸರು ಬಂಧಿಸಿದ್ದಾರೆ, ಅಭಿ ಅಲಿಯಾಸ್ ಅಮೂಲ್ ಬಂಧಿತ ಆರೋಪಿಯಾಗಿದ್ದು ಸುಬ್ರಮಣ್ಯನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ.

ಹಾಸನ: ರೌಡಿಶೀಟರ್ ಮಾಸ್ತಿಗೌಡನ ಅಟ್ಟಾಡಿಸಿ ಬರ್ಬರ ಹತ್ಯೆ!
ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ರೌಡಿಶೀಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯ
ರಾತ್ರಿ ಒಟ್ಟಿಗೆ ಕುಳಿತು ಪಾರ್ಟಿ ಮಾಡುತ್ತಿದ್ದ ರೌಡಿಶೀಟರ್ ಗಳ ನಡುವೆ ಜಗಳ ಏರ್ಪಟ್ಟಿದ್ದು, ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ವಿಜಯಪುರ: ಹಾಡಹಗಲೇ ಕಾರ್ಪೊರೇಟರ್ ಪತಿಯ ಬರ್ಬರ ಹತ್ಯೆ
ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ರೌಡಿಶೀಟರ್ ಹಾಗೂ ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ.

ಬೆಂಗಳೂರು: ಹಳೆ ವೈಷಮ್ಯ; ಬಿಯರ್ ಬಾಟಲಿಯಿಂದ ಹೊಡೆದು ರೌಡಿ ಕೊಲೆ
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಬಿಯರ್ ಬಾಟಲ್ ಹಾಗೂ ಕಲ್ಲಿನಿಂದ ತಲೆಗೆ ಹೊಡೆದು ರೌಡಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ

ಸಚಿವೆ ಶಶಿಕಲಾ ಜೊಲ್ಲೆ ನಿವಾಸದ ಎದುರು ರೌಡಿ ಶೀಟರ್ ಕೊಲೆಗೆ ಸ್ನೇಹಿತರ ಯತ್ನ
ಸಚಿವೆ ಶಶಿಕಲಾ ಜೊಲ್ಲೆ ಮನೆಯ ಮುಂದೆ ಕೊಲೆಯ ಯತ್ನ ನಡೆದಿದೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಭಯಾನಕ ಘಟನೆ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ದಾವಣೆಗೆರೆ: ರೌಡಿಶೀಟರ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ರೌಡಿಶೀಟರ್ ತಂಡ!
ರೌಡಿಶೀಟರ್ಗಳ ತಂಡ ಇಬ್ಬರು ರೌಡಿಶೀಟರ್ಗಳ ಮೇಲೆ ದಾಳಿ ನಡೆಸಿ ಓರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು ಮತ್ತೋರ್ವನ ಪರಿಸ್ಥಿತಿ ಗಂಭೀರವಾಗಿದೆ.

