Royal Challengers Bangalore

'ನನಗೆ ಬೆಂಬಲ ಕೊಟ್ಟಿದ್ದು ವಿರಾಟ್ ಕೊಹ್ಲಿ...': ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಭಾವುಕ
ಆರ್‌ಸಿಬಿ ಪರ ಮೂರನೇ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತದ ಸ್ಟಾರ್ ವೇಗಿ ಇದೀಗ ಬೆಂಗಳೂರು ತಂಡದಿಂದ ನಿರ್ಗಮಿಸಿದ್ದಾರೆ.

ಮುಂದಿನ ಪಂದ್ಯ ಗೆಲ್ಬೇಕು ಅಂದ್ರೆ RCB ಪ್ಲೇಯಿಂಗ್ XI ನಿಂದ ಇವರನ್ನು ಕೈಬಿಡಿ; ಮಾಜಿ ಆಟಗಾರನ ಸಲಹೆ
ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋಲು ಕಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತ ನಂತರ ಆರ್‌ಸಿಬಿ ಪ್ಲೇಯಿಂಗ್ XI ನಲ್ಲಿ ಭಾರಿ ಬದಲಾವಣೆ ಮಾಡಿಕೊಳ್ಳಬೇಕೆಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ಕೃಷ್ಣಮಾಚಾರಿ ಶ್ರೀಕಾಂತ್ ಸೂಚಿಸಿದ್ದಾರೆ.

WPL 2024: ಶ್ರೇಯಾಂಕಾ, ಪೆರ್ರಿಗೆ ಡಬಲ್ ಖುಷಿ; ಕಪ್ ಅಷ್ಟೇ ಅಲ್ಲ ಆರೆಂಜ್, ಪರ್ಪಲ್ ಕ್ಯಾಪ್ ಕೂಡ ನಮ್ದೇ...
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್‌ನ ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಈ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

‘ಈ ಸಲ ಕಪ್ ನಮ್ದೆ’ ಎನ್ನುತ್ತಿದ್ದ RCB ಅಭಿಮಾನಿಗಳಿಗಾಗಿ ಈ ಕಪ್: ಕನ್ನಡತಿ ಶ್ರೇಯಾಂಕಾ ಪಾಟೀಲ್
ಕಳೆದ ಕೆಲವು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ 'ಈ ಸಲ ಕಪ್ ನಮ್ದೇ' ಎಂಬ ಘೋಷಣೆಯು ಸಾಮಾಜಿಕ ಜಾಲತಾಣಗಳ ಸೇನೆಯ ನೆಚ್ಚಿನ ಟ್ರೋಲ್ ಆಗಿ ಉಳಿದಿತ್ತು. ಆದರೆ, ಈ ಭಾನುವಾರ ಇದಕ್ಕೆಲ್ಲ ಫುಲ್ ಸ್ಟಾಪ್ ಹಾಕಿದೆ.

WPL ಫೈನಲ್: ಚೊಚ್ಚಲ ಪ್ರಶಸ್ತಿ ಪಡೆಯುವ ತವಕದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಅವರು ತಮ್ಮ ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

IPL 2024: ಶೀಘ್ರದಲ್ಲೇ RCB ಅಭ್ಯಾಸ ಶಿಬಿರಕ್ಕೆ ಕಿಂಗ್ ಕೊಹ್ಲಿ!
ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್ 2024ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆಡಲು ರಾಯಲ್ ಚಾಲೆಂಜರ್ಸ್ ತಂಡವು ಸಜ್ಜಾಗುತ್ತಿದ್ದು, ಅದಕ್ಕೂ ಮುನ್ನ ಆರ್‌ಸಿಬಿ ಪ್ರಮುಖ ಆಟಗಾರರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಮಂಗಳವಾರ ಸಂಜೆ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಶಿಬಿರವನ್ನು ಸೇರಿಕೊಂಡಿದ್ದಾರೆ.

ಅಭಿಮಾನಿಗಳ ಪ್ರೀತಿಗೆ ಸೋತ RCB; ರಿಷಬ್ ಶೆಟ್ಟಿ ಮೂಲಕ ಹೆಸರು ಬದಲಾವಣೆ ಸುಳಿವು ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಗೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿದ್ದು, ಅಭಿಮಾನಿಗಳ ನೆಚ್ಚಿನ ಫ್ರಾಂಚೈಸಿ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಹೆಸರು ಬದಲಾವಣೆಯ ಸೂಚನೆ ನೀಡಿದೆ. ಈ ಮೂಲಕ ಅಭಿಮಾನಿಗಳ ಕೂಗಿಗೆ ಕೊನೆಗೂ ಆರ್‌ಸಿಬಿ ಮಣಿದಿದೆ.

2024 ಐಪಿಎಲ್ ಆವೃತ್ತಿ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿದಾಯ!
ಭಾರತದ ವಿಕೆಟ್‌ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಮಾರ್ಚ್ 22 ರಿಂದ ಪ್ರಾರಂಭವಾಗುವ 2024ರ ಐಪಿಎಲ್ ಆವೃತ್ತಿಯಲ್ಲಿ ತಮ್ಮ ಕೊನೆಯ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ. ಈ ಟಿ20 ಲೀಗ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ವಿದಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

WPL 2024: RCBಗೆ ಮತ್ತೊಂದು ಸೋಲು, ಕೊನೆಗೂ ಗೆಲುವಿನ ಖಾತೆ ತೆರೆದ ಗುಜರಾತ್ ಜೈಂಟ್ಸ್, ಸೋತರೂ ಅಂಕಪಟ್ಟಿಯಲ್ಲಿ ಬದಲಾವಣೆ ಇಲ್ಲ!
ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲು ಕಂಡಿದ್ದು, ಈ ವರೆಗೂ ಟೂರ್ನಿಯಲ್ಲಿ ಗೆಲುವೇ ಕಾಣದ ಗುಜರಾತ್ ತಂಡ ಆರ್ ಸಿಬಿ ವಿರುದ್ಧ 19 ರನ್ ಗಳ ಜಯ ದಾಖಲಿಸಿದೆ.

