Royal Challengers Bengaluru

IPL 2024: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದ RCB
ಶನಿವಾರ ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಪಂದ್ಯದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ 23 ಎಸೆತಗಳಲ್ಲಿ 64 ರನ್ ಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಆರ್‌ಸಿಬಿ 7ನೇ ಸ್ಥಾನದಲ್ಲಿದೆ.

ಐಪಿಎಲ್ 2024: ಗುಜರಾತ್ ವಿರುದ್ಧ RCB ಗೆಲುವು; ಪ್ಲೇ ಆಫ್ ಕನಸು ಜೀವಂತ
ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

IPL 2024: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿಯೇ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಸದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಶಿಖರ್ ಧವನ್ ಅವರನ್ನು ಹಿಂದಿಕ್ಕಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ರನ್ ಚೇಸ್‌ನಲ್ಲಿ ಹೆಚ್ಚು ಅರ್ಧ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

'ನಾನು ಕೋಪಗೊಂಡಿದ್ದೆ'; ವಿಲ್ ಜಾಕ್ಸ್ ಜೊತೆ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ಕೊಹ್ಲಿ ಹೇಳಿದ್ದೇನು?
ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಜಿಟಿ ವಿರುದ್ಧದ ಜಯದ ನಂತರ ಆರ್‌ಸಿಬಿ ಬ್ಯಾಟರ್‌ಗಳ ನಡುವಿನ ಸಂಭಾಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

IPL 2024: GT ವಿರುದ್ಧ ಭರ್ಜರಿ ಗೆಲುವು; RCB ಪ್ಲೇಆಫ್ ಕನಸು ಇನ್ನೂ ಜೀವಂತ!
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಪಿಎಲ್ 2024ನೇ ಆವೃತ್ತಿಯ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

IPL 2024: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ವಾಪಸ್!
ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

IPL 2024: ಹೊಸ ಆತ್ಮವಿಶ್ವಾಸದಲ್ಲಿ RCB; ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವಿನ ಓಟ ಮುಂದುವರಿಸಲು ತವಕ
ಭಾನುವಾರ ಇಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ 2024ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ತಂಡದೊಂದಿಗೆ ಸೆಣಸಲಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಎದುರು ಗೆಲುವು ಸಾಧಿಸುವ ಮೂಲಕ ಹೊಸ ಹುಮ್ಮಸ್ಸಿನಲ್ಲಿರುವ ಆರ್‌ಸಿಬಿ ಇದೀಗ ಮತ್ತೊಂದು ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ.

IPL 2024: ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರಣ್‌ಗೆ ದಂಡ
ಕೆಕೆಆರ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್ ಅವರಿಗೂ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಸೋಮವಾರ ಪ್ರಕಟಿಸಿದೆ.

IPL 2024: KKR ವಿರುದ್ಧ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ RCB; ಕಾರಣ ಏನು?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.

