Royal Challengers Bengaluru

ಪಂದ್ಯದಿಂದ ನನ್ನನ್ನು ಹೊರಗಿಡಿ; RCB ನಾಯಕ ಫಾಫ್ ಡುಪ್ಲೆಸಿ ಬಳಿ ಮನವಿ ಮಾಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಿಂದ ಅನಿರ್ದಿಷ್ಟ ಅವಧಿಗೆ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

IPL 2024: ಆರ್‌ಸಿಬಿಗೆ ಸತತ ಸೋಲು; ತಂಡದ ಮಾಲೀಕತ್ವ ಬದಲಿಸಲು ಮಹೇಶ್ ಭೂಪತಿ ಒತ್ತಾಯ
ಸೋಮವಾರ, ಆರ್‌ಸಿಬಿ ಮತ್ತೊಂದು ನಿರಾಶಾದಾಯಕ ಸೋಲು ಕಾಣುತ್ತಿದ್ದಂತೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನದ ಬಗ್ಗೆ ಭಾರತೀಯ ಟೆನಿಸ್ ತಾರೆ ಮಹೇಶ್ ಭೂಪತಿ ಎಕ್ಸ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RCB vs SRH: ಆರ್‌ಸಿಬಿ ಬೌಲಿಂಗ್ ಪಡೆಗೆ ಸವಾಲು; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯ
ಐಪಿಎಲ್ 2024ರ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದು, ಆಡಿರುವ 6 ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದೆ ಮತ್ತು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿರುವ ಆರ್‌ಸಿಬಿಗೆ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು ಎನ್ನುವ ಅನಿವಾರ್ಯ ಎದುರಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಆಡಬೇಕು: ದಿನೇಶ್ ಕಾರ್ತಿಕ್ ಬ್ಯಾಟಿಂಗ್‌ಗೆ ಮೈದಾನದಲ್ಲಿಯೇ ರೋಹಿತ್ ಶರ್ಮಾ ಮೆಚ್ಚುಗೆ
ಮುಂಬೈ ಇಂಡಿಯನ್ಸ್ ಬ್ಯಾಟರ್ ರೋಹಿತ್ ಶರ್ಮಾ ಅವರು ಮೈದಾನದಲ್ಲಿನ ಕಾಮೆಂಟ್‌ಗಳಿಗೆ ಹೆಸರುವಾಸಿಯಾಗಿದ್ದಾರೆ. ಗುರುವಾರ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2024ರ ಪಂದ್ಯದ ವೇಳೆ ರೋಹಿತ್ ಶರ್ಮಾರ ಮತ್ತೊಂದು ಹೇಳಿಕೆಯು ಸ್ಟಂಪ್ ಮೈಕ್‌ನಲ್ಲಿ ಸೆರೆಯಾಗಿದೆ.

RCB vs MI: ಮುಂಬೈ ಇಂಡಿಯನ್ಸ್ ತಂಡಕ್ಕೆ ಆರ್‌ಸಿಬಿ ಸವಾಲು, ಬೆಂಗಳೂರು ತಂಡದಲ್ಲಿ ಬದಲಾವಣೆ?
ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ (ಎಂಐ) ತಂಡದೊಂದಿಗೆ ಸೆಣಸಲಿದೆ.

ವಿರಾಟ್ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್ ಟೀಕೆಗಳಿಗೆ ವೀರೇಂದ್ರ ಸೆಹ್ವಾಗ್ ಹೇಳಿದ್ದೇನು?
ವಿರಾಟ್ ಕೊಹ್ಲಿ ಶತಕ ಗಳಿಸಿದ್ದರೂ ಕೂಡ ಐಪಿಎಲ್‌ನಲ್ಲಿ ನಿಧಾನಗತಿಯ ಶತಕ ಗಳಿಸಿರುವುದಕ್ಕಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ ವಿರೋಧ ಕೇಳಿಬರುತ್ತಿದೆ. ಕೊಹ್ಲಿ ಇನ್ನಷ್ಟು ಅತ್ಯುತ್ತಮ ಸ್ಟ್ರೈಕ್‌ರೇಟ್‌ನಲ್ಲಿ ಆಡಬಹುದಿತ್ತು ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಉತ್ತರಿಸಿದ್ದಾರೆ.

IPL 2024: ಐಪಿಎಲ್ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ!
ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸುತ್ತಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ತಮ್ಮ ಎಂಟನೇ ಶತಕ ಸಿಡಿಸಿದ ಅವರು ಮತ್ತೊಂದು ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ಮೊದಲ ಬ್ಯಾಟರ್ ಆಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.

RCB vs RR: ಜೈಪುರದಲ್ಲಿ ಆರ್‌ಆರ್ ಎದುರಿಸಲಿರುವ ಆರ್‌ಸಿಬಿ; ಪ್ಲೇಯಿಂಗ್ 11 ನಲ್ಲಿ ಬದಲಾವಣೆ?
ಶನಿವಾರ ಇಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಸೆಣಸಲಿವೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಕಂಡಿರುವ ಆರ್‌ಸಿಬಿ ಸದ್ಯ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ಕುರಿತು ಕೀಳುಮಟ್ಟದ ಪೋಸ್ಟ್: ದರ್ಶನ್ ಅಭಿಮಾನಿಗಳ ವಿರುದ್ಧ ಅಪ್ಪು ಫ್ಯಾನ್ಸ್ ದೂರು!
IPL 2024 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ವಿಚಾರ ಮುಂದಿಟ್ಟುಕೊಂಡು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಕುರಿತು ಕೀಳುಮಟ್ಟದ ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕಿಡಿಗೇಡಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

