ರಾಜ್ಯಬರ: ಕೇಂದ್ರ ತಂಡಕ್ಕೆ ವಸ್ತುಸ್ಥಿತಿ ಮನವರಿಕೆ; ಮನ್ರೇಗಾ ಯೋಜನೆಯ 475 ಕೋಟಿ ರೂ. ಬಾಕಿ ಹಣ ಬಿಡುಗಡೆಗೆ ಒತ್ತಾಯ- ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವು ಹತ್ತು ದಿನಗಳೊಳಗೆ ವರದಿ ಸಲ್ಲಿಸಲಿದೆ. ಆ ಬಳಿಕ ಪರಿಹಾರದ ಮೊತ್ತ ಖಚಿತವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.