rules

'ನಾವು ಬ್ಯಾರಿಕೇಡ್ ಮುರಿದಿದ್ದೇವೆ, ಆದರೆ ಕಾನೂನು ಮುರಿಯುವುದಿಲ್ಲ; ಅಸ್ಸಾಂನಲ್ಲಿ ಸರ್ಕಾರ ರಚಿಸುತ್ತೇವೆ': ರಾಹುಲ್ ಗಾಂಧಿ
ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಹಿಡಿಯಲಾಗಿದ್ದು, ಇದನ್ನು ಖಂಡಿಸಿ ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ, ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು-ಸಿಎಂ ಸಿದ್ದರಾಮಯ್ಯ
ನಾಳೆ ಅಯೋಧ್ಯೆಯಲ್ಲಿ ಐತಿಹಾಸಿಕ ಭವ್ಯವಾದ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಕೋಮು ಸೌಹರ್ದತೆ, ಶಾಂತಿ ಕಾಪಾಡುವಂತೆ ದೇಶಾದ್ಯಂತ ಗೃಹ ಇಲಾಖೆ ಕ್ರಮ ಕೈಗೊಂಡಿದ್ದು ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಎಚ್ಚರಿಕೆ ವಹಿಸಲಾಗಿದೆ.

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು: ಸಿಎಂ ಸಿದ್ದರಾಮಯ್ಯ
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಭೂ ಮಾಲೀಕರಿಂದ ನಿಯಮ ಉಲ್ಲಂಘನೆ: ನಗರದಲ್ಲಿ ಅನಧಿಕೃತ ಬೋರ್ ವೆಲ್'ಗಳ ಹೆಚ್ಚಳ!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಯಿಂದ ಅನುಮತಿ ಪಡೆಯದ ಹೊರತು ನಗರದಲ್ಲಿ ಬೋರ್‌ವೆಲ್‌ಗಳನ್ನು ಕೊರೆಯುವಂತಿಲ್ಲ. ಈ ನಿಯಮದ ಹೊರತಾಗಿಯೂ ನಗರದಲ್ಲಿ ಭೂ ಮಾಲೀಕರು ಬೋರ್ ವೆಲ್ ಗಳನ್ನು ಕೊರೆಸುತ್ತಿರುವುದು ವರದಿಯಾಗುತ್ತಿವೆ.

ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳ ಅಸಭ್ಯ ವರ್ತನೆಗೆ ಬ್ರೇಕ್! ತಿಂಡಿ ತಿನಿಸು ಒಯ್ಯುವಂತಿಲ್ಲ: ಇದಕ್ಕೆ ಅಧಿಕಾರಿಗಳು ಏನಂತಾರೆ?ಏನಂತಾರೆ?
ಕಬ್ಬನ್ ಪಾರ್ಕ್ ಒಳಗೆ ತಿಂಡಿ-ತೀರ್ಥ ತೆಗೆದುಕೊಂಡು ಹೋಗುವ ಹಾಗಿಲ್ಲ, ಫೋಟೋಗ್ರಾಫರ್ ಗಳು ಫೋಟೋ ತೆಗೆಯುವ ಹಾಗಿಲ್ಲ, ಲವರ್ಸ್ ಬೇಕಾಬಿಟ್ಟಿ ವರ್ತಿಸುವ ಹಾಕಿಲ್ಲ ಎಂಬಿತ್ಯಾದಿ ಕಠಿಣ ನಿಯಮಗಳನ್ನು ಸಾರ್ವಜನಿಕರಿಗೆ ತೋಟಗಾರಿಕೆ ಇಲಾಖೆ ತಂದಿದೆ ಎಂಬ ಸುದ್ದಿಯನ್ನು ಇತ್ತೀಚೆಗೆ ಕೇಳಿದ್ದೆವು.

'ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನನಗೂ ಬೇಡ; ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ನಾನೇನು ಸನ್ಯಾಸಿ ಅಲ್ಲ'
ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ಹಾಗಂತ ನಾನೇನೂ ಸನ್ಯಾಸಿ ಅಲ್ಲ ಎಂದು ಸಚಿವ ವಿ. ಸೋಮಣ್ಣ ಹೇಳುವ ಮೂಲಕ ತಮ್ಮ ಮುಂದಿನ ಹೆಜ್ಜೆಯ ಕುರಿತಾಗಿ ಕುತೂಹಲ ಕೆರಳಿಸಿದ್ದಾರೆ.

ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ಇಲ್ಲ: ರೈಲ್ವೆ
ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದು ರೈಲ್ವೆ ಸ್ಪಷ್ಟನೆ ನೀಡಿದೆ.

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ, ಲಾಕ್ ಡೌನ್ ಹೇರುವುದಿಲ್ಲ; ನಾಳೆ ದೆಹಲಿಗೆ: ಸಿಎಂ ಬೊಮ್ಮಾಯಿ
ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ ಎಂದು ಹೇಳುವ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿನಿಮಾ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ನಾಳೆ-ನಾಡಿದ್ದರಲ್ಲಿ ಕೆಲವು ಆದೇಶ ಹೊರಡಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ
ಸಿನಿಮಾ ಚಿತ್ರೀಕರಣ ವೇಳೆ ನಿಯಮಗಳನ್ನು ಗಾಳಿಗೆ ತೂರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

