rural areas

ಸ್ಮಾರ್ಟ್ ಫೋನ್, ಅಧ್ಯಯನ... ಗ್ರಾಮೀಣ ಭಾಗಗಳಲ್ಲಿ ಬಾಲಕಿಯರಿಗಿಂತ ಗಂಡು ಮಕ್ಕಳೇ ಮುಂದು!
ಸ್ಮಾರ್ಟ್ ಫೋನ್, ಐಫೋನ್ ಇಂತಹ ಅತ್ಯಾಧುನಿಕ ತಂತ್ರಜ್ಞಾನಗಳು ಸಾಮಾನ್ಯವಾಗಿ ಸಿಟಿಯ ಜನರು ಮಕ್ಕಳು ಹೊಂದಿರುತ್ತಾರೆ ಎಂಬ ಸಾಮಾನ್ಯ ನಂಬಿಕೆ. ಹೆಣ್ಣುಮಕ್ಕಳಿಗಿಂತ ಇಂತವುಗಳ ಮೇಲೆ ಗಂಡುಮಕ್ಕಳಿಗೇ ಒಲವು ಹೆಚ್ಚು ಎಂದು ಭಾವಿಸುತ್ತೇವೆ.

ಗ್ರಾಮೀಣ ಪ್ರದೇಶಗಳಲ್ಲಿ ಮುಂದುವರೆದ ಅಸ್ಪೃಶ್ಯತೆ: ಹೈಕೋರ್ಟ್ ಬೇಸರ
ದೇವಾಲಯ ಏಕತೆ ಮತ್ತು ಎಲ್ಲರೂ ಒಳ್ಳಗೊಳ್ಳುವಿಕೆಯ ಸಂಕೇತ. ಅಸ್ಪೃಶ್ಯತೆ ಆಚರಣೆ ಸಾಂವಿಧಾನಬಾಹಿರ ಎಂದು ತಿಳಿಸಿದ್ದೂ, ಗ್ರಾಮೀಣ ಭಾಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ದೇವಾಲಯ ಪ್ರವೇಶ ಮತ್ತು ಪೂಜೆಗೆ ನಿರಾಕರಿಸಿ ಅಡ್ಡಿ ಪಡಿಸುವ ಪ್ರಕ್ರಿಯೆ ಮುಂದುವರೆದಿರುವುದು ದುರುದೃಷ್ಟಕರ ಎಂದು ಹೈಕೋರ್ಟ್ ಗುರುವಾರ ಬೇಸರ ವ್ಯಕ್ತಪಡಿಸಿದೆ.

ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಕರ್ನಾಟಕ, ಉತ್ತರಾಖಂಡ್ ತಾಲ್ಲೂಕು ಕೇಂದ್ರಗಳಿಗೆ ತಲುಪಿಸುತ್ತಿರುವ ನಿಮ್ಹಾನ್ಸ್
ಗ್ರಾಮೀಣ ಪ್ರದೇಶಗಳ ಜನರಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ತಲುಪಿಸುವ ಕ್ರಮದಲ್ಲಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನಿಮ್ಹಾನ್ಸ್ ಮತ್ತು ಆಶ್ರಯ ಹಸ್ತ ಟ್ರಸ್ಟ್ (AHT) ಮಾದರಿ ಸಮಗ್ರ ಗ್ರಾಮೀಣ ಮಾನಸಿಕ ಆರೋಗ್ಯ ಕಾರ್ಯಕ್ರಮ ನಮನ್ (Nimhans-AHT) ಅನುಷ್ಠಾನಗೊಳಿಸುವ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿವೆ.

ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರು ಸಿದ್ಧರಿಲ್ಲ: ಸದನದಲ್ಲಿ ಪಕ್ಷಾತೀತವಾಗಿ ಶಾಸಕರ ಪ್ರಸ್ತಾಪ
ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದಿರುವ ಬಗ್ಗೆ ಪಕ್ಷಾತೀತವಾಗಿ ಶಾಸಕರು ಪ್ರಸ್ತಾಪಿಸಿದರು. ವೈದ್ಯರ ವೇತನವನ್ನು ಹೆಚ್ಚಿಸಬೇಕು ಮತ್ತು ಅವರ ಕೆಲಸದ ಸ್ಥಳದಲ್ಲಿ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಗ್ರಾಮೀಣ ಭಾಗಗಳಲ್ಲಿ ಹೆಚ್ಚಿದ ಕೊರೋನಾ: ಮೊಬೈಲ್ ಘಟಕಗಳ ಆರಂಭಕ್ಕೆ ಸರ್ಕಾರ ಚಿಂತನೆ
ನಗರ ಬಳಿಕ ಇದೀಗ ಗ್ರಾಮೀಣ ಭಾಗಗಳಲ್ಲಿ ಮಹಾಮಾರಿ ಕೊರೋನಾ ವ್ಯಾಪಕಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮೊಬೈಲ್ ಘಟಕಗಳ ಮೂಲಕ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳು: ಡಾ. ಕೆ.ಸುಧಾಕರ್
ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ಕೋವಿಡ್ ಸೋಂಕಿತರನ್ನು ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಹೆಚ್ಚಳ: ಸಮುದಾಯ ಆಧಾರಿತ, ಪ್ರಾಥಮಿಕ ಆರೋಗ್ಯ ಸೇವೆ ವಿಸ್ತರಣೆಗೆ ಕೇಂದ್ರ ಸೂಚನೆ
ಕೋವಿಡ್ ಎರಡನೇ ಅಲೆ ಗ್ರಾಮಾಂತರ, ಪಟ್ಟಣ, ಅರೆ ನಗರ ಪ್ರದೇಶಗಳಲ್ಲಿ ಸಹ ನಿಧಾನವಾಗಿ ಹೆಚ್ಚುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಸಮುದಾಯ ಆಧಾರಿತ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ-ಪ್ರಧಾನಿ ಮೋದಿ ಕರೆ
ಪ್ರಸ್ತುತ ದೇಶದ ಮುಂದೆ ಕಳೆದ ವರ್ಷಕ್ಕಿಂತ ದೊಡ್ಡದಾದ ಸವಾಲಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೆ ಲಸಿಕೆ ಹಾಕಿಸುವ ಮೂಲಕ ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಕರೆ ಹೇಳಿದ್ದಾರೆ.

ನಗರ ಪ್ರದೇಶಗಳಲ್ಲಿರುವಂತೆ ಹಳ್ಳಿಗಳಲ್ಲಿಯೂ ಉದ್ಯಾನವನಗಳು: ನರೇಗಾದಡಿ ನಿರ್ಮಾಣ
ಪಾರ್ಕ್, ಕೆರೆ, ವಾಕಿಂಗ್, ಜಾಗಿಂಗ್ ಮಾಡುವುದೆಲ್ಲ ಸಿಟಿ ಮಂದಿ, ನಗರದ ಯಾಂತ್ರೀಕೃತ ಬದುಕಿನ ಮಧ್ಯೆ ತಮ್ಮ ಆರೋಗ್ಯ ಸುಧಾರಿಸಿಕೊಳ್ಳಲು, ಮನಸ್ಸಿಗೆ, ದೇಹಕ್ಕೆ ಆಹ್ಲಾದಕರ ವಾತಾವರಣ ಸಿಗಲು ಸಿಟಿ ಮಂದಿ ಮನೆ ಪಕ್ಕ ಇರುವ ಪಾರ್ಕ್ ಗೆ ಹೋಗುತ್ತಾರೆ.

