ರಾಜ್ಯಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವೃತ್ತಿಪರ ಕೋರ್ಸ್ಗಳಲ್ಲಿ ಶೇ. 7.5 ರಷ್ಟು ಒಳಮೀಸಲಾತಿ, ಕರಡು ನಿಯಮ ಪ್ರಕಟ!
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಉನ್ನತ ಶಿಕ್ಷಣ ಇಲಾಖೆಯು ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಶೇ. 15ರಷ್ಟು ಇರುವ ಗ್ರಾಮೀಣ ಕೋಟಾವನ್ನು ತಲಾ ಶೇ.7.5 ರಂತೆ 2 ಭಾಗಗಳಾಗಿ ವಿಭಜಿಸಿ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.