Russia Ukraine Conflict

ಉಕ್ರೇನ್ ಯುದ್ಧ ಕೊನೆಗೊಳಿಸಿದರೆ ನಾನು ಸ್ವರ್ಗಕ್ಕೆ ಹೋಗಬಹುದು: Donald Trump
ನಿನ್ನೆ ಫಾಕ್ಸ್ & ಫ್ರೆಂಡ್ಸ್ ಜೊತೆಗಿನ ಫೋನ್ ಸಂದರ್ಶನದಲ್ಲಿ, ಅಮೆರಿಕ ಅಧ್ಯಕ್ಷರು, ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಕ್ರಮ ಕೈಗೊಳ್ಳುವುದಕ್ಕೆ ಹೊಸ ವಿವರಣೆಯನ್ನು ನೀಡಿದರು.

Watch | ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಕೈವ್‌ನಲ್ಲಿ ಬೃಹತ್ ಸ್ಫೋಟಗಳು

Watch | ಉಕ್ರೇನ್‌ನೊಂದಿಗೆ ವ್ಯವಹಾರ ಕಷ್ಟ, ರಷ್ಯಾದೊಂದಿಗೆ ಸುಲಭ

ಭಾರತಕ್ಕೆ ಸಾಕಷ್ಟು ಮೌಲ್ಯವಿದೆ... ಸಂಘರ್ಷ ಕೊನೆಗೊಳಿಸುವ ತಾಕತ್ತು ಇರುವುದು ಮೋದಿಗೆ ಮಾತ್ರ: ಝೆಲೆನ್ಸ್ಕಿ
ರಷ್ಯಾ ಜೊತೆಗಿನ ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸುವ ತಾಕತ್ತು ಇರುವುದು ಪ್ರಧಾನಿ ಮೋದಿಗೆ ಮಾತ್ರ. ಇದು ಭಾರತಕ್ಕೂ ಬಹಳ ಮಹತ್ವದ್ದಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತೊಮ್ಮೆ ಸಂಘರ್ಷ ನಿಲ್ಲಿಸುವ ಪ್ರಧಾನಿ ಮೋದಿ ಪಾತ್ರದ ಕುರಿತಂತೆ ಪುನರುಚ್ಚರಿಸಿದ್ದಾರೆ.

ಪೂರ್ವ ಉಕ್ರೇನ್ ನಗರದ ಪಿಜ್ಜಾ ರೆಸ್ಟೋರೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 3 ಮಕ್ಕಳು ಸೇರಿದಂತೆ 9 ಮಂದಿ ಸಾವು
ಪೂರ್ವ ಉಕ್ರೇನ್‌ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್‌ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಉಕ್ರೇನ್‌ನ ಐದು ಅಂತಸ್ತಿನ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಮೂವರು ಸಾವು, ಆರು ಮಂದಿಗೆ ಗಾಯ
ಆಗ್ನೇಯ ಉಕ್ರೇನ್‌ನ ನಗರದ ಐದು ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಗುರುವಾರ ರಷ್ಯಾದ ಕ್ಷಿಪಣಿ ಅಪ್ಪಳಿಸಿದ್ದರಿಂದ ಮೂವರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವು ಎರಡನೇ ವರ್ಷಕ್ಕೆ ವಿಸ್ತರಿಸಿದೆ.

ಮಾತುಕತೆ, ರಾಜತಾಂತ್ರಿಕತೆಯಿಂದ ಮಾತ್ರ ಉಕ್ರೇನ್ ಬಿಕ್ಕಟ್ಟು ಪರಿಹರಿಸಲು ಸಾಧ್ಯ: ನರೇಂದ್ರ ಮೋದಿ
ಭಾರತಕ್ಕೆ ಭೇಟಿ ನೀಡಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಹೇಳಿಕೆಯಲ್ಲಿ ಮೋದಿ, 'ಉಕ್ರೇನ್ ವಿವಾದವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಪರಿಹರಿಸಬಹುದು ಎಂದು ಭಾರತವು ಮೊದಲಿನಿಂದಲೂ ಸ್ಪಷ್ಟಪಡಿಸಿದೆ' ಎಂದು ಹೇಳಿದರು.

ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲ ಉಕ್ರೇನ್‌ಗೆ ಧನಾತ್ಮಕವಾಗಿರುತ್ತದೆ: ವೊಲೊಡಿಮಿರ್ ಝೆಲೆನ್‌ಸ್ಕಿ
ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

'ಕದನ ವಿರಾಮ'ವಿದ್ದರೂ ಸಾಂಪ್ರದಾಯಿಕ ಕ್ರಿಸ್‌ಮಸ್ ದಿನದಂದು ಉಕ್ರೇನ್ ಮೇಲೆ ರಷ್ಯಾ ದಾಳಿ, ಇಬ್ಬರು ಸಾವು
ಉಕ್ರೇನ್‌ನಲ್ಲಿ ಸಾಂಪ್ರದಾಯಿಕ ಕ್ರಿಸ್‌ಮಸ್ ಆಚರಣೆ ನಡೆಯುವ ಹಿನ್ನೆಲೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಕದನ ವಿರಾಮ ಘೋಷಿಸಿದ್ದರು ಕೂಡ ಇಬ್ಬರು ಉಕ್ರೇನಿಯನ್ನರು ಸಾವಿಗೀಡಾಗಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಕೀವ್ ಆಡಳಿತ ಭಾನುವಾರ ತಿಳಿಸಿದೆ.

