ಗೃಹಲಕ್ಷ್ಮೀ ಯೋಜನೆ ಮೂಲಕ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಮಹಿಳೆಯರ ಆರೋಗ್ಯ ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.