ಸಿನಿಮಾ ಸುದ್ದಿಕನ್ನಡ ಚಿತ್ರರಂಗದ ದಂತಕಥೆ, ಹಿರಿಯ ನಿರ್ದೇಶಕ ಭಗವಾನ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಭಗವಾನ್ ನಿಧನ ಹೊಂದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸೋಮವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.