ರಾಜ್ಯನಟ ಚೇತನ್ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು: ಮಂಡಳಿ ಅಧ್ಯಕ್ಷರಿಂದ ನಗರ ಪೊಲೀಸ್ ಆಯುಕ್ತರಿಗೆ ದೂರು
ನಟ ಚೇತನ್ ನೀಡಿರುವ ಹೇಳಿಕೆ ಈಗ ಭಾರೀ ವಿವಾದ ಸೃಷ್ಟಿಸಿದೆ. ಬ್ರಾಹ್ಮಣ ಸಮುದಾಯ ವಿರುದ್ಧ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದ್ದೇನೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.