Salumarada Thimmakka

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕ ದರ್ಶನಕ್ಕೆ ವ್ಯವಸ್ಥೆ; ಮಧ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ
ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಮಧ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ವೇಳೆ ಸಿಎಂ, ಡಿಸಿಎಂ ಭಾಗಿಯಾಗಲಿದ್ದಾರೆ.

'ವೃಕ್ಷಮಾತೆ' ಕಳೆದುಕೊಂಡ ಭಾರತ ಮಾತೆ: ದತ್ತುಪುತ್ರನ ತಲೆ ಸವರಿದ ಸಾಲುಮರದ ತಿಮ್ಮಕ್ಕನ ಕೊನೆಯ ದಿನಗಳ Video Viral
ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 ಕಿ.ಮೀ ವ್ಯಾಪ್ತಿಯಲ್ಲಿ 385 ಆಲದ ಮರಗಳನ್ನು ನೆಟ್ಟಿದ್ದಕ್ಕಾಗಿ ಅವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮನ್ನಣೆಯನ್ನು ಪಡೆದರು.

ಬೆಂಗಳೂರು: ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ, ಆಸ್ಪತ್ರೆಗೆ ದಾಖಲು
ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆಸ್ಪತ್ರೆಯಿಂದ ಡಿಸ್ಚಾರ್ಜ್
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೊಂಟದ ಮೂಳೆ ಮುರಿತದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಿಮ್ಮಕ್ಕ ಗುಣಮುಖರಾಗಿ 24 ದಿನದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಾಹಿತಿ ಭೈರಪ್ಪ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಐವರು ಸಾಧಕರಿಗೆ ಗೌರವ ಡಾಕ್ಟರೇಟ್
ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಇಸ್ರೋ ಚೇರ್ಮನ್ ಕೆ. ಶಿವನ್, ಸಾಲು ಮರದ ತಿಮ್ಮಕ್ಕ, ಕವಿ ಡಾ. ಚನ್ನವೀರ ಕಣವಿ, ಜಾನಪದ ಸಾಹಿತಿ ಡಾ. ಎಂ. ಜಿ. ಬಿರಾದಾರ್ ಅವರನ್ನು ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿಎಂ: ಮರ ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ
ಕುಂದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ...

ಅಭಿವೃದ್ದಿ ಯೋಜನೆ ನೆಪ: ತಿಮ್ಮಕ್ಕ ನೆಟ್ಟ ಸಾಲುಮರಗಳಿಗೆ ಕೊಡಲಿ ಪೆಟ್ಟು?
ಅರಣ್ಯ ಹಾಗೂ ಪರಿಸರಪ್ರೇಮಿಗಳಿಗೆ ಇದು ಆಘಾತಕಾರಿ ಸುದ್ದಿ! ರಾಮನಗರ ಜಿಲ್ಲೆ ಕುಡೂರು ಹಾಗೂ ಹುಲಿಕಲ್ ನಡುವಿನ ರಸ್ತೆ ಅಗಲೀಕರಣಕ್ಕೆ ಸರ್ಕಾರ ಯೋಜನೆ ರೂಪಿಸಿದೆ.

ಸ್ಮರಣಿಕೆಗಳನ್ನು ನನಗೆ ತಿನ್ನಲು ಆಗುತ್ತದೆಯೇ?; 'ಪದ್ಮಶ್ರೀ' ಸಾಲುಮರದ ತಿಮ್ಮಕ್ಕನ ಬೇಸರದ ನುಡಿ
ತಮ್ಮನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ವರ್ಷದ ಸಾಲುಮರದ ...

