Sampath Raj

ವಿಧಾನಸಭಾ ಚುನಾವಣೆ: ಟಿಕೆಟ್ ಗಾಗಿ ಸಂಪತ್ ರಾಜ್ ಲಾಬಿ, ಕಾಂಗ್ರೆಸ್ ಕಾರ್ಯಕರ್ತರ ವಿರೋಧ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿವಿ ರಾಮನ್ ನಗರದಿಂದ ಸ್ಪರ್ಧಿಸಲು ಕಾಂಗ್ರೆಸ್ ನಿಂದ ಟಿಕೆಟ್ ಪಡೆಯಲು ಬೆಂಗಳೂರು ಮಾಜಿ ಮೇಯರ್ ಸಂಪತ್ ರಾಜ್ ಅವರು ಲಾಭಿ ನಡೆಸುತ್ತಿದ್ದು, ಇದಕ್ಕೆ ಪ್ಷ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿಕೆ
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಮೇಯರ್ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆ 2021ರ ಜನವರಿ ತಿಂಗಳಿಗೆ ಮುಂದೂಡಿಕೆ ಆಗಿದೆ.

ಸಂಪತ್ ರಾಜ್ ವಜಾಗೆ ಅಖಂಡ ಶ್ರೀನಿವಾಸ್ ಆಗ್ರಹ: ಆರೋಪಿಯಾದ ಮಾತ್ರಕ್ಕೆ ಶಿಸ್ತುಕ್ರಮ ಸಾಧ್ಯವಿಲ್ಲ ಎಂದ ಡಿಕೆಶಿ
ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಶಾಸಕರ ಮನೆಗೆ ಬೆಂಕಿ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಗೆ ಮತ್ತೆ 5 ದಿನ ನ್ಯಾಯಾಂಗ ಬಂಧನ
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಮತ್ತೆ ಐದು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿಗೆ; ಕೋರ್ಟ್ ಆದೇಶ
ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದೆ.

ಸಂಪತ್ ರಾಜ್ ಬಂಧನದ ಮೂಲಕ ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ: ಅಖಂಡ ಶ್ರೀನಿವಾಸ ಮೂರ್ತಿ
ತಪ್ಪಿತಸ್ಥರು ಯಾರೇ ಇದ್ದರು ಅವರಿಗೆ ಶಿಕ್ಷೆಯಾಗಬೇಕು. ಸಂಪತ್ ರಾಜ್'ರನ್ನು ಬಂಧನಕ್ಕೊಳಪಡಿಸುವ ಮೂಲಕ ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಹೇಳಿದ್ದಾರೆ.

ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ: ಕಾಂಗ್ರೆಸ್ಗೆ ಬಿಜೆಪಿ ಪ್ರಶ್ನೆ
ಡಿ.ಜೆ.ಹಳ್ಳಿ ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗುತ್ತಿದ್ದಂತೆ ಬಿಜೆಪಿ, ರಾಜ್ಯ ಕಾಂಗ್ರೆಸ್ ವಿರುದ್ಧ ಹರಿಹಾಯಲಾರಂಭಿಸಿದೆ.

ಸಂಪತ್ ರಾಜ್ ಎಲ್ಲೂ ಓಡಿ ಹೋಗಿರಲಿಲ್ಲ: ಡಿಕೆ ಶಿವಕುಮಾರ್
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿದೆ. ಈ ಬಗ್ಗೆ ಪ್ರತಿಕ್ರಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ ಎಂದಿದ್ದಾರೆ.

ಸಂಪತ್ ರಾಜ್ ಬಂಧನ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ ಬೊಮ್ಮಾಯಿ
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

