Samyukta Kisan Morcha

ರೈತ ವಿರೋಧಿ ಕಾನೂನುಗಳ ವಿರುದ್ಧ ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ 'ದೆಹಲಿ ಚಲೋ' ಪ್ರತಿಭಟನೆ
ಸಂಯುಕ್ತ ಕಿಸಾನ್ ಮೋರ್ಚಾವು ಕೇಂದ್ರ ಸರ್ಕಾರದ 'ರೈತ ವಿರೋಧಿ' ಕಾನೂನುಗಳು ಮತ್ತು ಇತರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಫೆಬ್ರುವರಿ 26ರಂದು ರಾಷ್ಟ್ರವ್ಯಾಪಿ 'ದೆಹಲಿ ಚಲೋ' ಪ್ರತಿಭಟನೆಗೆ ಕರೆ ನೀಡಿದೆ. ದೇಶದಾದ್ಯಂತ ಐದು ಲಕ್ಷಕ್ಕೂ ಹೆಚ್ಚು ರೈತರು ರಾಷ್ಟ್ರ ರಾಜಧಾನಿಯಲ್ಲಿ ಸೇರುವ ನಿರೀಕ್ಷೆಯಿದೆ.

ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಪ್ರತಿಭಟನೆ, ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೆಹಲಿ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ನಂತರ ಭಾನುವಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ
ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು, ಸಾಲಮನ್ನಾ ಮತ್ತು ಪಿಂಚಣಿ ಸೇರಿದಂತೆ ತನ್ನ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮತ್ತೊಂದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಹೇಳಿದೆ.

ಕೃಷಿ ಕಾಯ್ದೆ ರದ್ದು: ಪ್ರತಿಭಟನೆ ಹಿಂಪಡೆದ ರೈತರು, ಡಿಸೆಂಬರ್ 11 ರಂದು ದೆಹಲಿ ಗಡಿಯಿಂದ ನಿರ್ಗಮನ
ತಮ್ಮ ಬೇಡಿಕೆಯಂತೆ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಗುರುವಾರ ಹಸ್ತಾಂತರಿಸಿದ ನಂತರ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗುತ್ತಿದೆ

ರೈತರ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದೇವೆ ಮುಂದೇನು ಎನ್ನುವುದನ್ನು ಬುಧವಾರ ಸಭೆ ನಂತರ ನಿಶ್ಚಯ
ಸರ್ಕಾರ ಈ ಹಿಂದೆ ಎಂ ಎಸ್ ಪಿ ನಿಗದಿ ಕುರಿತಾಗಿ ತೀರ್ಮಾನ ಕೈಗೊಳ್ಳಲು ಸಮಿತಿ ರಚಿಸುವುದಾಗಿ ತಿಳಿಸಿತ್ತು. ಆದರೆ ರೈತನಾಯಕರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ಒಂದೇ ಅಲ್ಲ, ನಮ್ಮ ಬೇಡಿಕೆ ಈಡೇರುವತನಕ ರೈತ ಪ್ರತಿಭಟನೆ ನಿಲ್ಲದು: ರಾಕೇಶ್ ಟಿಕಾಯತ್ ಗುಡುಗು
ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಾಗಿ ಘೋಷಿಸಿದ್ದರೂ, ಕನಿಷ್ಠ ಬೆಂಬಲ ಬೆಲೆ ಮೇಲಿನ ಕಾನೂನು ಖಾತರಿ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪುನರುಚ್ಚರಿಸಿದ್ದಾರೆ.

ಕೇಂದ್ರ ಸಚಿವ ಸಂಪುಟದಿಂದ ಅಜಯ್ ಮಿಶ್ರಾ ವಜಾಗೊಳಿಸಿ: ರಾಷ್ಟ್ರಪತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪತ್ರ
ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಂಪುಟದಲ್ಲಿ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ...

ಭಾರತ್ ಬಂದ್: ಪ್ರತಿಭಟನೆ ವೇಳೆ ಮೂವರು ರೈತರ ಸಾವು
ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ಆಚರಣೆ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ಮಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರೈತರ 'ಮಹಾಪಂಚಾಯತ್' ತಡೆಯಲು ಬಂದರೆ ಬಲವಂತವಾಗಿ ನುಗ್ಗುವೆವು: ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯಿತ್ ಗುಡುಗು
ಮುಂಬರಲಿರುವ ಚುನಾವಣಾ ಸಮಯದಲ್ಲಿ ಕೇಂದ್ರ ವಿರುದ್ಧ ಜನರನ್ನು ಒಗ್ಗಟ್ಟಾಗಿಸಲು ರೈತರ ಮಹಾಪಂಚಾಯತ್ ಕಾರ್ಯಕ್ರಮವನ್ನು ಬಳಸಿಕೊಳ್ಳುವುದಾಗಿ ರಾಕೇಶ್ ಟಿಕಾಯಿತ್ ತಿಳಿಸಿದ್ದಾರೆ.

