Sandalwood Drug case

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಇಡಿ ವಶಕ್ಕೆ
ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ಬೆಂಗಳೂರು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸ್ಯಾಂಡಲ್ ವುಡ್ ನಟಿಯರನ್ನು ಬಿಡುಗಡೆಗೊಳಿಸುವಂತೆ ನ್ಯಾಯಾಧೀಶರಿಗೆ ಬೆದರಿಕೆ ಪತ್ರ: ಇಬ್ಬರ ಬಂಧನ
ಡ್ರಗ್ ಕೇಸಿನಲ್ಲಿ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: ನಟಿ ರಾಗಿಣಿ ಜಾಮೀನು ವಿಚಾರಣೆ ಮುಂದೂಡಿಕೆ
ಸ್ಯಾಂಡಲ್ವುಡ್ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರಿವ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ನಿರಾಶೆಯಾಗಿದೆ. ನಟಿ ರಾಗಿಣಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ನ್ಯಾಯಾಲಯ ಮುಂದೂಡಿ ಆದೇಶಿಸಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟ ಒಬೆರಾಯ್ ಪತ್ನಿಗೆ ಮತ್ತೆ ಸಿಸಿಬಿ ನೋಟಿಸ್
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಮತ್ತೆ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ ಕೇಸು: ಆದಿತ್ಯ ಆಳ್ವ ಸೋದರಿ ಪ್ರಿಯಾಂಕ ಆಳ್ವ ಒಬೆರಾಯ್ ಗೆ ಸಿಸಿಬಿ ನೊಟೀಸ್
ಸ್ಯಾಂಡಲ್ ವುಡ್ ಡ್ರಗ್ ಕೇಸಿಗೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳ(ಸಿಸಿಬಿ) ಇದೀಗ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಹಾಗೂ ಆದಿತ್ಯ ಆಳ್ವ ಸೋದರಿ ಪ್ರಿಯಾಂಕಾ ಆಳ್ವ ಒಬೆರಾಯ್ ಗೆ ನೊಟೀಸ್ ನೀಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ!
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ.

ಸಿಸಿಬಿಯಿಂದ ನೊಟೀಸ್ ಬಂದಿದ್ದು ನೋವಾಗಿಲ್ಲ, ನಂತರ ನನ್ನನ್ನು ಬಿಂಬಿಸಿದ ರೀತಿ ಬೇಸರ ತಂದಿದೆ- ಆಂಕರ್ ಅನುಶ್ರೀ
ಕನ್ನಡದ ಹಿರಿತೆರೆ, ಕಿರುತೆರೆಯ ಕೆಲವು ಕಲಾವಿದರು ಡ್ರಗ್ಸ್ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ತೀವ್ರ ವಿಚಾರಣೆ ನಡೆಸುತ್ತಿದ್ದು ಕೆಲ ದಿನಗಳ ಹಿಂದೆ ಮಂಗಳೂರು ಸಿಸಿಬಿ ಪೊಲೀಸರು ಆಂಕರ್ ಮತ್ತು ನಟಿ ಅನುಶ್ರೀಗೆ ನೊಟೀಸ್ ನೀಡಿತ್ತು.

ಸ್ಯಾಂಡಲ್'ವುಡ್ ಡ್ರಗ್ಸ್ ಕೇಸ್: ಆರೋಪಿಗಳು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ, ಜಾಮೀನು ನೀಡಲು ಕೋರ್ಟ್ ನಿರಾಕರಣೆ
ಸ್ಯಾಂಡಲ್'ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ವಿರುದ್ಧ ಅಧಿಕಾರಿಗಳು ಬಲವಾದ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದು, ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದರಿಂದ ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿದ್ದು ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ ಎಂದು ತಿಳಿದುಬಂದಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸು: ಮಾದಕ ಲೋಕ, ವೇಶ್ಯಾವಾಟಿಕೆ ಬಗ್ಗೆ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ ಮಹತ್ವದ ಸಾಕ್ಷಿ
ಅಕ್ರಮ ಡ್ರಗ್ಸ್ ಕೇಸಿನಲ್ಲಿ ನಗರ ಅಪರಾಧ ದಳ(ಸಿಸಿಬಿ) ನಡೆಸುತ್ತಿರುವ ತನಿಖೆಗೆ ಸಂಬಂಧಪಟ್ಟಂತೆ ವಿಚಾರಣೆ ನಡೆಯುತ್ತಿರುವಾಗ ದೇಶಾದ್ಯಂತ ಡ್ರಗ್ಸ್ ಮತ್ತು ವೇಶ್ಯಾವಾಟಿಕೆಯ ದಂಧೆ ಒಂದೊಂದೇ ಅಕ್ರಮ ಬಯಲಿಗೆ ಬರುತ್ತಿದೆ.

